ಚಿಕ್ಕಬಳ್ಳಾಪುರ: ಆರ್‌ಎಸ್‌ಎಸ್, ಬಿಜೆಪಿಯವರೇ ಈ ದೇಶಕ್ಕೆ ನಿಮ್ಮ ಕೊಡುಗೆ ಏನು? ಕಾಂಗ್ರೆಸ್‍ನವರ ಕೊಡುಗೆ ಏನು ಎಂಬುದರ ಬಗ್ಗೆ ಚರ್ಚಿಸಲು ನಾವು ಸಿದ್ದ. ತಾಕತ್ತಿದ್ದರೆ ಚರ್ಚೆಗೆ ಬನ್ನಿ ಎಂದು ಚಿಕ್ಕಬಳ್ಳಾಪುರದಲ್ಲಿ ವಿಧಾನಪರಿಷತ್ ಸದಸ್ಯ ಉಗ್ರಪ್ಪ ಸವಾಲು ಹಾಕಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಈ ದೇಶದ ಪರಂಪರೆ ಸ್ವಾತಂತ್ರದ ಆಶಯಗಳು ಗೊತ್ತಿಲ್ಲ. ಸಮಾಜ, ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ನಡೆ ಬಿಜೆಪಿಯದ್ದು. ಹೀಗಾಗಿ ನಿಮ್ಮ ಹಳೆಯ ಯೂನಿಫಾರಂ ಚಡ್ಡಿಯನ್ನು ಸಾಂಕೇತಿಕವಾಗಿ ಸುಟ್ಟರೇ ನಿಮಗೆ ಏನು ಸಮಸ್ಯೆ ಎಂದು ಪ್ರಶ್ನಿಸಿದ್ದಾರೆ.
ಆರ್‌ಎಸ್‌ಎಸ್ ಬಿಜೆಪಿಯವರೇ ಈ ದೇಶಕ್ಕೆ ನಿಮ್ಮ ಕೊಡುಗೆ ಏನು? ಕಾಂಗ್ರೆಸ್‍ನವರ ಕೊಡುಗೆ ಏನು ಎಂಬುದರ ಬಗ್ಗೆ ಚರ್ಚೆ ನಡೆಸಲು ನಾವು ಸಿದ್ದರಾಗಿದ್ದೇವೆ. ನೀವು ಚರ್ಚೆ ನಡೆಸಲು ತಯಾರಿದ್ದರೆ ಬನ್ನಿ ವಿಧಾನಸೌಧದ ಮುಂದೆ ಡೇಟ್ ಟೈಂ ಫಿಕ್ಸ್ ಮಾಡಿ. ಅದನ್ನು ಬಿಟ್ಟು ಹುಳುಕುಗಳನ್ನು ಮುಚ್ಚಿಕೊಳ್ಳಲು ಭಾವನಾತ್ಮಕ ವಿಚಾರಗಳನ್ನು ತೆಗೆಯಬೇಡಿ. ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರವೃತ್ತಿ ಮುಂದುವರೆಸಬೇಡಿ ಎಂದಿದ್ದಾರೆ.
ಮೋದಿ ಆಧುನಿಕ ದುರ್ಯೋಧನ ಸರ್ವಾಧಿಕಾರಿ. ಇಂತಹ ಮೋದಿ, ಬಿಜೆಪಿ, ಆರ್‌ಎಸ್‌ಎಸ್‌ನವರಿಗೆ ಜನ ಪಾಠ ಕಲಿಸುವ ದಿನಗಳು ದೂರ ಇಲ್ಲ. ಈಗಾಲಾದರೂ ಬಹುತ್ವದ ಕಡೆಗೆ ಬದಲಾಗಲು ಪ್ರಯತ್ನ ಮಾಡಿದರೆ ಓಳ್ಳೆಯದು ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…