Featured

ಆರ್‌ಎಸ್‌ಎಸ್ ಬ್ಯಾನ್ ಬಗ್ಗೆ ಯಾರೊಬ್ಬರೂ ಹೇಳಿಕೆ ನೀಡಿಲ್ಲ , ಚರ್ಚೆಯೂ ನಡೆದಿಲ್ಲ:  ಸಚಿವ ದಿನೇಶ್ ಗುಂಡೂರಾವ್ – vishwanews24

ಆರ್‌ಎಸ್‌ಎಸ್ ಬ್ಯಾನ್ ಬಗ್ಗೆ ಯಾರೊಬ್ಬರೂ ಹೇಳಿಕೆ ನೀಡಿಲ್ಲ ಚರ್ಚೆಯೂ ನಡೆದಿಲ್ಲ:  ಸಚಿವ ದಿನೇಶ್ ಗುಂಡೂರಾವ್

ಚಿತ್ರದುರ್ಗ: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂಘಟನೆಯ ಬ್ಯಾನ್ ಯಾರೊಬ್ಬರೂ ಹೇಳಿಕೆ ನೀಡಿಲ್ಲ. ಈ ಬಗ್ಗೆ ಚರ್ಚೆಗಳನ್ನೂ ಮಾಡಲಾಗಿಲ್ಲ. ಕೇವಲ ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಡೆಸದಂತೆ ಕ್ರಮವಹಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಹಾನಗಲ್ ಗ್ರಾಮದಲ್ಲಿ ಮಾತನಾಡಿದ ಅವರು, ಆರ್.ಎಸ್.ಎಸ್. ಬ್ಯಾನ್ ಮಾಡಬೇಕು ಎಂದು ಯಾರಾದರೂ ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದ ಸಚಿವರು, ಆ ಬಗ್ಗೆ ಯಾರೂ ಹೇಳಿಲ್ಲ, ಚರ್ಚೆಯೇ ಮಾಡಿಲ್ಲ ಎಂದು ಖಚಿತಪಡಿಸಿದರು. ಸಂವಿಧಾನದ ಅನ್ವಯ ಎಲ್ಲರಿಗೂ ಮುಕ್ತವಾದ ಅವಕಾಶವಿದೆ. ಆದರೆ, ಆರ್.ಎಸ್.ಎಸ್. ಒಂದು ರಾಜಕೀಯ ಸಂಘಟನೆ ಎಂಬ ಬಗ್ಗೆ ಸಂದೇಹವಿಲ್ಲ ಎಂದ ಅವರು, ಈ ಕಾರಣಕ್ಕೆ ಸರ್ಕಾರಿ ಸ್ಥಳ, ಶಾಲೆಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳನ್ನು ನಡೆಸಬಾರದು ಎಂದು ಒತ್ತಿ ಹೇಳಿದರು.

ಶಾಲೆ, ಕಾಲೇಜುಗಳಲ್ಲಿ ರಾಜಕೀಯವನ್ನು ತರುವುದು ಸರಿಯಲ್ಲ. ಯಾವುದೇ ಸಂಸ್ಥೆಯಾಗಲಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆದುಕೊಳ್ಳಬೇಕು ಮತ್ತು ಅದನ್ನು ಆರ್.ಎಸ್.ಎಸ್. ಶಾಖೆಗಳಿಗಾಗಿ ಉಪಯೋಗಿಸಬಾರದು ಎಂದು ತಿಳಿಸಿದರು. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗಲೇ ಸರ್ಕಾರಿ ಜಾಗವನ್ನು ಯಾರೂ ಬಳಸಬಾರದೆಂದು ಆದೇಶವಿತ್ತು. ಸರ್ಕಾರಿ ಜಾಗಗಳಲ್ಲಿ, ಅದರಲ್ಲೂ ಮುಖ್ಯವಾಗಿ ಶಾಲಾ-ಕಾಲೇಜು ಆವರಣಗಳಲ್ಲಿ ಯಾವುದೇ ರಾಜಕೀಯ ಸಂಘಟನೆಗಳ ಚಟುವಟಿಕೆಗೆ ಅವಕಾಶ ನೀಡಬಾರದು ಎಂಬುದು ಆದೇಶದ ಉದ್ದೇಶವಾಗಿದೆ ಎಂದರು.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

10 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

14 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

14 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

14 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

15 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

15 hours ago