ಆರ್ಥಿಕತೆಯಲ್ಲಿ ಭಾರತಕ್ಕೆ ವಿಶ್ವದಲ್ಲೇ 5ನೇ ಸ್ಥಾನ : ಪ್ರಧಾನಿ ಮೋದಿಗೆ ಮತ್ತೊಮ್ಮೆ ಯಶಸ್ಸು – Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ಅಮೆರಿಕಾ, ಚೀನಾ, ಜಪಾನ್, ಜರ್ಮನಿ, ಮತ್ತು ಇಂಗ್ಲೆಂಡ್ ಹೊರತು ಪಡಿಸಿದರೆ ಪ್ರಸ್ತುತ ಭಾರತ 2.6 ಟ್ರಿಲಿಯನ್ ಅಮೆರಿಕನ್ ಡಾಲರ್ ನೊಂದಿಗೆ ವಿಶ್ವದ ಆರನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿದೆ. ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ ಮತ್ತಿತರ ಕ್ರಮಗಳನ್ನು ಕೈಗೊಳ್ಳುವ ಮೂಲಕ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ಹಾದಿಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತ- ದಕ್ಷಿಣ ಆಫ್ರಿಕಾ ವ್ಯಾಪಾರ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತ ವೇಗವಾಗಿ ಆರ್ಥಿಕತೆ ಹೊಂದಿರುವ ರಾಷ್ಟ್ರವಾಗಿದ್ದು, ಮುಂದಿನ ಪೀಳಿಗೆಯ ಮೂಲಸೌಕರ್ಯಗಳೊಂದಿಗೆ ನವ ಭಾರತ ನಿರ್ಮಾಣ ಮಾಡಲು ಸರ್ಕಾರ ಬದ್ಧವಾಗಿರುವುದಾಗಿ ಹೇಳಿದರು.ದೇಶದಲ್ಲಿ ಹೂಡಿಕೆ ವಾತಾವರಣವನ್ನು ಇನ್ನಷ್ಟು ಸುಧಾರಿಸಲು “ದಿನನಿತ್ಯದ ಆಧಾರದ ಮೇಲೆ” ಸುಧಾರಣೆ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ಹಾದಿಯಲ್ಲಿ ಭಾರತ ಸಾಗುತ್ತಿರುವುದಾಗಿ  ಅವರು ತಿಳಿಸಿದ್ದಾರೆ.

ವಿಶ್ವ ಬ್ಯಾಂಕಿನ ಸುಲಭ ವ್ಯವಹಾರ ಮಾಡುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 77 ನೇ ಸ್ಥಾನಕ್ಕೇರಿದೆ. ಕಳೆದ ನಾಲ್ಕು ವರ್ಷಗಳಲ್ಲಿ 65 ಸ್ಥಾನ ಮೇಲಕ್ಕೇರಿದ್ದು, ಮುಂದಿನ ಪೀಳಿಗೆಗೆ ಕೌಶಲ್ಯಾಭಿವೃದ್ದಿ ಮತ್ತು ಮೂಲಸೌಕರ್ಯ ಒದಗಿಸುವ ಮೂಲಕ ನವ ಭಾರತ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿರುವುದಾಗಿ ನರೇಂದ್ರ ಮೋದಿ ತಿಳಿಸಿದರು.