ನವದೆಹಲಿ: ಅಮೆರಿಕಾ, ಚೀನಾ, ಜಪಾನ್, ಜರ್ಮನಿ, ಮತ್ತು ಇಂಗ್ಲೆಂಡ್ ಹೊರತು ಪಡಿಸಿದರೆ ಪ್ರಸ್ತುತ ಭಾರತ 2.6 ಟ್ರಿಲಿಯನ್ ಅಮೆರಿಕನ್ ಡಾಲರ್ ನೊಂದಿಗೆ ವಿಶ್ವದ ಆರನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿದೆ. ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ ಮತ್ತಿತರ ಕ್ರಮಗಳನ್ನು ಕೈಗೊಳ್ಳುವ ಮೂಲಕ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ಹಾದಿಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತ- ದಕ್ಷಿಣ ಆಫ್ರಿಕಾ ವ್ಯಾಪಾರ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತ ವೇಗವಾಗಿ ಆರ್ಥಿಕತೆ ಹೊಂದಿರುವ ರಾಷ್ಟ್ರವಾಗಿದ್ದು, ಮುಂದಿನ ಪೀಳಿಗೆಯ ಮೂಲಸೌಕರ್ಯಗಳೊಂದಿಗೆ ನವ ಭಾರತ ನಿರ್ಮಾಣ ಮಾಡಲು ಸರ್ಕಾರ ಬದ್ಧವಾಗಿರುವುದಾಗಿ ಹೇಳಿದರು.ದೇಶದಲ್ಲಿ ಹೂಡಿಕೆ ವಾತಾವರಣವನ್ನು ಇನ್ನಷ್ಟು ಸುಧಾರಿಸಲು “ದಿನನಿತ್ಯದ ಆಧಾರದ ಮೇಲೆ” ಸುಧಾರಣೆ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ಹಾದಿಯಲ್ಲಿ ಭಾರತ ಸಾಗುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ವಿಶ್ವ ಬ್ಯಾಂಕಿನ ಸುಲಭ ವ್ಯವಹಾರ ಮಾಡುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 77 ನೇ ಸ್ಥಾನಕ್ಕೇರಿದೆ. ಕಳೆದ ನಾಲ್ಕು ವರ್ಷಗಳಲ್ಲಿ 65 ಸ್ಥಾನ ಮೇಲಕ್ಕೇರಿದ್ದು, ಮುಂದಿನ ಪೀಳಿಗೆಗೆ ಕೌಶಲ್ಯಾಭಿವೃದ್ದಿ ಮತ್ತು ಮೂಲಸೌಕರ್ಯ ಒದಗಿಸುವ ಮೂಲಕ ನವ ಭಾರತ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿರುವುದಾಗಿ ನರೇಂದ್ರ ಮೋದಿ ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…