ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಮತ್ತು ಕಾರ್ಯಕ್ರಮ ಆಯೋಜಿಸುವ ಸಂಸ್ಥೆಗೆ ಪ್ರತಿ ಜೋಡಿಗೆ 5 ಸಾವಿರ ರೂ.ಗಳನ್ನು ನೀಡುವ ಕಾರ್ಯಕ್ರಮಕ್ಕೆ ಸರಕಾರದ ಮಂಜೂರಾತಿ ದೊರೆತಿದೆ.
ರಾಜ್ಯ ಬಜೆಟ್ ನಲ್ಲಿ ಈ ಕುರಿತು ಘೋಷಿಸಲಾಗಿತ್ತು. ಇದೀಗ ಸರಕಾರಿ ಆದೇಶ ಹೊರಬಿದ್ದಿದೆ. ಈ ಯೋಜನೆಯಡಿಯಲ್ಲಿ 5 ಸಾವಿರ ಜೋಡಿ ಮಿತಿವರೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಸಕ್ತ ಕಾರ್ಯನಿರ್ವಹಿಸುತ್ತಿರುವ 250 ಮೌಲಾನಾ ಆಝಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿಯು ವರೆಗೆ ತರಗತಿ ಪ್ರಾರಂಭಿಸಲು ಘೋಷಿಸಲಾಗಿತ್ತು. ಪ್ರಸಕ್ತ ವರ್ಷ 100 ಆಝಾದ್ ಶಾಲೆ ಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಮೇಲ್ದರ್ಜೆ ಗೇರಿಸಲು ಆದೇಶ ಹೊರಡಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…