ಆರ್ಥಿಕ ಅಡಚಣೆಗೆ ನೊಂದು ಆತ್ಮಹತ್ಯೆಗೆ ಶರಣಾದ ಜಿಲ್ಲಾ ಜೆಡಿಎಸ್ ವಕ್ತಾರ -Vishwanews24

ಉಡುಪಿ: ಆರ್ಥಿಕ ಸಮಸ್ಯೆಯಿಂದ ಮನನೊಂದು ಉಡುಪಿಯ ಜಿಲ್ಲಾ ಜೆಡಿಎಸ್ ವಕ್ತಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರಂಗ್ರಪಾಡಿ ಬೈಲೂರಿನಲ್ಲಿ ನಡೆದಿದೆ.

ಜಾತ್ಯತಿತ ಜನತಾ ದಳದ (ಜೆಡಿಎಸ್) ಜಿಲ್ಲಾ ವಕ್ತಾರ, ಭಿರ್ತಿ ಕೋ. ಅಪರೇಟಿವ್ ಸೊಸೈಟಿಯ ಕಾರ್ಯನಿರ್ವಾಹಣಾಧಿಕಾರಿ ಪ್ರದೀಪ್ ಜಿ. ಬೈಲೂರು (37) ಆತ್ಮಹತ್ಯೆ ಶರಣಾದವರು.

ಕಳೆದ ರಾತ್ರಿ ತಂದೆ-ತಾಯಿ ತೀರ್ಥಹಳ್ಳಿಯ ಮನೆಗೆ ಹೋಗಿದ್ದಾಗ ಕೊರಂಗ್ರಪಾಡಿ ಜಂಕ್ಷನ್ ಬಳಿಯ ತಮ್ಮ ಬಾಡಿಗೆ ಮನೆಯಲ್ಲಿ ಪ್ರದೀಪ್ ನೇಣಿಗೆ ಶರಣಾಗಿದ್ದಾರೆ. ವಿವಾಹಿತರಾಗಿದ್ದ ಅವರು, ಕೆಲವು ಸಮಯಗಳ ಹಿಂದೆ ಪತ್ನಿಗೆ ವಿಚ್ಛೇದನ ನೀಡಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಆರ್ಥಿಕ ಮುಗ್ಗಟ್ಟು ಕಾರಣವೆಂದು ಪೊಲೀಸರು ತಿಳಿಸಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago