Featured

ಆರ್ಥಿಕ ಬಿಕ್ಕಟ್ಟು : ಪಾಕಿಸ್ತಾನದಲ್ಲಿ ಇಂಧನ ಉಳಿಸಲು ಮಾಲ್, ಮಾರ್ಕೆಟ್, ಮದುವೆ ಹಾಲ್‌ಗಳು ಅವಧಿಗೆ ಮುನ್ನವೇ ಬಂದ್ – Vishwanews24

ಆರ್ಥಿಕ ಬಿಕ್ಕಟ್ಟು – ಪಾಕಿಸ್ತಾನದಲ್ಲಿ ಇಂಧನ ಉಳಿಸಲು ಮಾಲ್, ಮಾರ್ಕೆಟ್, ಮದುವೆ ಹಾಲ್‌ಗಳು ಅವಧಿಗೆ ಮುನ್ನವೇ ಬಂದ್

ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಿಂದ ಒದ್ದಾಡುತ್ತಿರುವ ನೆರೆಯ ಪಾಕಿಸ್ತಾನ ತನ್ನ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಒದ್ದಾಡುತ್ತಿದೆ. ಈ ಹಿನ್ನೆಲೆ ಪಾಕಿಸ್ತಾನದ ಸರ್ಕಾರ ಇಂಧನ ಉಳಿಸಲು ಮಾರುಕಟ್ಟೆ, ಮಾಲ್, ಮದುವೆ ಹಾಲ್‌ಗಳನ್ನು ಶೀಘ್ರವೇ ಮುಚ್ಚುವುದಾಗಿ ಘೋಷಿಸಿದೆ.

ಇಂಧನ ಉಳಿಸಲು ಹಾಗೂ ಇತರ ದೇಶಗಳಿಂದ ತೈಲವನ್ನು ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಲು ಈ ನಿರ್ಧಾರವನ್ನು ಮಾಡಲಾಗಿದೆ. ಈ ಕ್ರಮಕ್ಕೆ ಪಾಕಿಸ್ತಾನದ ಕ್ಯಾಬಿನೆಟ್ ಸಚಿವರು ಅನುಮೋದನೆ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಮಾರುಕಟ್ಟೆ ಹಾಗೂ ಮಾಲ್‌ಗಳನ್ನು ಈಗ ರಾತ್ರಿ 8:30ಕ್ಕೆ ಮುಚ್ಚಲಾಗುತ್ತದೆ. ಮದುವೆ ಮಂಟಪಗಳನ್ನು ರಾತ್ರಿ 10:00 ಗಂಟೆಗೆ ಮುಚ್ಚಲಾಗುತ್ತದೆ. ಈ ಕ್ರಮದಿಂದ ನಮಗೆ 60 ಶತಕೋಟಿ ರೂ. ಉಳಿತಾಯವಾಗುತ್ತದೆ ಎಂದು ತಿಳಿಸಿದ್ದಾರೆ.

ದೇಶದ ಪರಿಸ್ಥಿತಿಯನ್ನು ನಿಭಾಯಿಸಲು ಪಾಕ್ ಇನ್ನೂ ಹಲವು ಕ್ರಮಗಳನ್ನು ಕೈಗೊಂಡಿದೆ. ಪ್ರಕಾಶಮಾನವಾದ ಬಲ್ಬ್ ಉತ್ಪಾದನೆಯನ್ನು ಫೆಬ್ರವರಿ 1 ರಿಂದ ಸ್ಥಗಿತಗೊಳಿಸಲು ಸೂಚಿಸಲಾಗಿದ್ದು, ಜುಲೈ ತಿಂಗಳಿನಿಂದ ಅಸಮರ್ಥ ಫ್ಯಾನ್‌ಗಳ ಉತ್ಪಾದನೆಯನ್ನು ನಿಲ್ಲಿಸಲಾಗುವುದು ಎನ್ನಲಾಗಿದೆ. ಈ ಕ್ರಮದಿಂದ 22 ಶತಕೋಟಿ ರೂ. ಉಳಿತಾಯವಾಗುತ್ತದೆ ಎಂದು ಆಸಿಫ್ ತಿಳಿಸಿದ್ದಾರೆ.

ಪಾಕ್ ಸರ್ಕಾರ 1 ವರ್ಷದೊಳಗೆ ಕಡಿಮೆ ವಿದ್ಯುತ್ ಬಳಸುವ ಗೀಸರ್‌ಗಳನ್ನು ಬಳಸಲು ಹಾಗೂ ಹಳೆಯದನ್ನು ಅಥವಾ ಹೆಚ್ಚು ವಿದ್ಯುತ್ ಉಪಯೋಗಿಸುವ ಗೀಸರ್‌ಗಳನ್ನು ಬದಲಿಲು ಜನರಿಗೆ ಕಡ್ಡಾಯವಾದ ಸೂಚನೆ ನೀಡಿದೆ. ಇದರಿಂದ 92 ಶತಕೋಟಿ ರೂ. ಉಳಿತಾಯವಾಗುತ್ತದೆ. ಬೀದಿ ದೀಪಗಳ ಬದಲು ಪರ್ಯಾಯ ದೀಪ ಬಳಕೆಯಿಂದ 4 ಶತಕೋಟಿ ರೂ. ಉಳಿಸಬಹುದು ಎಂದಿದೆ.

ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ಕಚೇರಿಗಳಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡಲಾಗುತ್ತಿದ್ದು, ಆದಷ್ಟು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago