ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಿಂದ ಒದ್ದಾಡುತ್ತಿರುವ ನೆರೆಯ ಪಾಕಿಸ್ತಾನ ತನ್ನ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಒದ್ದಾಡುತ್ತಿದೆ. ಈ ಹಿನ್ನೆಲೆ ಪಾಕಿಸ್ತಾನದ ಸರ್ಕಾರ ಇಂಧನ ಉಳಿಸಲು ಮಾರುಕಟ್ಟೆ, ಮಾಲ್, ಮದುವೆ ಹಾಲ್‌ಗಳನ್ನು ಶೀಘ್ರವೇ ಮುಚ್ಚುವುದಾಗಿ ಘೋಷಿಸಿದೆ.
ಇಂಧನ ಉಳಿಸಲು ಹಾಗೂ ಇತರ ದೇಶಗಳಿಂದ ತೈಲವನ್ನು ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಲು ಈ ನಿರ್ಧಾರವನ್ನು ಮಾಡಲಾಗಿದೆ. ಈ ಕ್ರಮಕ್ಕೆ ಪಾಕಿಸ್ತಾನದ ಕ್ಯಾಬಿನೆಟ್ ಸಚಿವರು ಅನುಮೋದನೆ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಮಾರುಕಟ್ಟೆ ಹಾಗೂ ಮಾಲ್‌ಗಳನ್ನು ಈಗ ರಾತ್ರಿ 8:30ಕ್ಕೆ ಮುಚ್ಚಲಾಗುತ್ತದೆ. ಮದುವೆ ಮಂಟಪಗಳನ್ನು ರಾತ್ರಿ 10:00 ಗಂಟೆಗೆ ಮುಚ್ಚಲಾಗುತ್ತದೆ. ಈ ಕ್ರಮದಿಂದ ನಮಗೆ 60 ಶತಕೋಟಿ ರೂ. ಉಳಿತಾಯವಾಗುತ್ತದೆ ಎಂದು ತಿಳಿಸಿದ್ದಾರೆ.
ದೇಶದ ಪರಿಸ್ಥಿತಿಯನ್ನು ನಿಭಾಯಿಸಲು ಪಾಕ್ ಇನ್ನೂ ಹಲವು ಕ್ರಮಗಳನ್ನು ಕೈಗೊಂಡಿದೆ. ಪ್ರಕಾಶಮಾನವಾದ ಬಲ್ಬ್ ಉತ್ಪಾದನೆಯನ್ನು ಫೆಬ್ರವರಿ 1 ರಿಂದ ಸ್ಥಗಿತಗೊಳಿಸಲು ಸೂಚಿಸಲಾಗಿದ್ದು, ಜುಲೈ ತಿಂಗಳಿನಿಂದ ಅಸಮರ್ಥ ಫ್ಯಾನ್‌ಗಳ ಉತ್ಪಾದನೆಯನ್ನು ನಿಲ್ಲಿಸಲಾಗುವುದು ಎನ್ನಲಾಗಿದೆ. ಈ ಕ್ರಮದಿಂದ 22 ಶತಕೋಟಿ ರೂ. ಉಳಿತಾಯವಾಗುತ್ತದೆ ಎಂದು ಆಸಿಫ್ ತಿಳಿಸಿದ್ದಾರೆ.
ಪಾಕ್ ಸರ್ಕಾರ 1 ವರ್ಷದೊಳಗೆ ಕಡಿಮೆ ವಿದ್ಯುತ್ ಬಳಸುವ ಗೀಸರ್‌ಗಳನ್ನು ಬಳಸಲು ಹಾಗೂ ಹಳೆಯದನ್ನು ಅಥವಾ ಹೆಚ್ಚು ವಿದ್ಯುತ್ ಉಪಯೋಗಿಸುವ ಗೀಸರ್‌ಗಳನ್ನು ಬದಲಿಲು ಜನರಿಗೆ ಕಡ್ಡಾಯವಾದ ಸೂಚನೆ ನೀಡಿದೆ. ಇದರಿಂದ 92 ಶತಕೋಟಿ ರೂ. ಉಳಿತಾಯವಾಗುತ್ತದೆ. ಬೀದಿ ದೀಪಗಳ ಬದಲು ಪರ್ಯಾಯ ದೀಪ ಬಳಕೆಯಿಂದ 4 ಶತಕೋಟಿ ರೂ. ಉಳಿಸಬಹುದು ಎಂದಿದೆ.
ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ಕಚೇರಿಗಳಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡಲಾಗುತ್ತಿದ್ದು, ಆದಷ್ಟು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…