2021ರ ಅಕ್ಟೋಬರ್ 3ರಂದು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ತನಿಖಾಧಿಕಾರಿಗಳು ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರೋಪದಲ್ಲಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಸುಮಾರು 20 ಜನರನ್ನು ಬಂಧಿಸಿದ್ದರು. ಪ್ರಕರಣದ ವೇಳೆ ಪ್ರಭಾಕರ್ ಸೈಲ್ ಕೂಡಾ ಬೆಳಕಿಗೆ ಬಂದಿದ್ದರು.ಪ್ರಭಾಕರ್ ಸೈಲ್ ಅವರು ಡ್ರಗ್ಸ್ ಪ್ರಕರಣದ ಮತ್ತೊಬ್ಬ ಪ್ರಮುಖ ಸಾಕ್ಷಿ ಕೆ.ಪಿ.ಗೋಸಾವಿ ಅವರ ಅಂಗರಕ್ಷಕರಾಗಿದ್ದರು. ಪ್ರಭಾಕರ್ ಸೈಲ್ ಅವರು ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಸುಲಿಗೆ ಆರೋಪ ಮಾಡಿದ್ದರು.
ಎನ್‌ಸಿಬಿ ದಾಳಿ ನಡೆಸಿದ ಸ್ಥಳದಲ್ಲಿ ಮತ್ತು ಎನ್‌ಸಿಬಿ ಕಚೇರಿಯಲ್ಲಿ ಕಾಣಿಸಿಕೊಂಡಿದ್ದ ಗೋಸಾವಿ, ಶಾರುಕ್ ಪುತ್ರ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಫೋಟೊ ಮತ್ತು ವಿಡಿಯೊ ತೆಗೆದಿದ್ದರು. ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ತಾನು ಸ್ವತಂತ್ರ ತನಿಖಾಧಿಕಾರಿ ಎಂದು ಗೋಸಾವಿ ಹೇಳಿಕೊಂಡಿದ್ದರು. ಆದರೆ, ಎನ್‌ಸಿಬಿ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ‘ಸ್ವತಂತ್ರ ಸಾಕ್ಷಿ’ ಎಂದು ಘೋಷಿಸಿತ್ತು.ಆರ್ಯನ್ ಖಾನ್ ಬಿಡುಗಡೆಗೆ ಎನ್‌ಸಿಬಿಯ ಅಧಿಕಾರಿಯೊಬ್ಬರು ಮತ್ತು ಕೆ.ಪಿ.ಗೋಸಾವಿ ಸಹಿತ ಇತರ ವ್ಯಕ್ತಿಗಳು ₹25 ಕೋಟಿ ಲಂಚ ಕೇಳಿದ್ದರು. ಇದರಲ್ಲಿ ₹8 ಕೋಟಿ ಹಣವನ್ನು ಎನ್‌ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರಿಗೆ ನೀಡಬೇಕೆಂದು ಗೋಸಾವಿ ಹೇಳಿದ್ದಾಗಿ ಪ್ರಭಾಕರ್ ಸೈಲ್ ಆರೋಪಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…