ಬೆಂಗಳೂರು: ಮಾಜಿ ಭಾರತೀಯ ಆಟಗಾರ ದಿನೇಶ್ ಕಾರ್ತಿಕ್ ಅವರನ್ನು ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ನೇಮಿಸಲಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಆರ್‌ಸಿಬಿ, “ಆರ್‌ಸಿಬಿ ಹೊಂದಿರುವ ಅತ್ಯುತ್ತಮ ಬ್ಯಾಟಿಂಗ್ ಕ್ರಮಾಂಕಕ್ಕೆ ದಿನೇಶ್ ಕಾರ್ತಿಕ್ ತಮ್ಮ ಅನುಭವ ಹಾಗೂ ತಂಡದ ತಾತ್ವಿಕತೆಯ ಬಗೆಗಿನ ಆಳವಾದ ತಿಳಿವಳಿಕೆಯಿಂದ ತಂಡಕ್ಕೆ ಆಸ್ತಿಯಾಗಲಿದ್ದಾರೆ” ಎಂದು ಹೇಳಿದೆ.
“ಕಾರ್ತಿಕ್ ಮೊದಲಿಗೆ 2015 ಹಾಗೂ 2016ರಲ್ಲಿ ಆರ್‌ಸಿಬಿ ತಂಡದ ಪರವಾಗಿ ಆಡಿದ್ದರು. 2024ರ ಋತುವಿನ 15 ಪಂದ್ಯಗಳಲ್ಲಿ 187.36 ಸ್ಟ್ರೈಕ್ ರೇಟ್‌ನೊಂದಿಗೆ ಅವರು 326 ರನ್ ಗಳಿಸಿದ್ದರು. ಆದರೆ, ಅವರ ಪ್ರಭಾವವು ಅವರು ಗಳಿಸಿದ ರನ್‌ಗಳ ಸಂಖ್ಯೆಯನ್ನೂ ಮೀರಿದೆ” ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ತಮ್ಮ ನೇಮಕದ ಕುರಿತು ಪ್ರತಿಕ್ರಿಯಿಸಿರುವ ದಿನೇಶ್ ಕಾರ್ತಿಕ್, “ವೃತ್ತಿಪರ ಹಂತದಲ್ಲಿ ತರಬೇತಿ ನೀಡುವುದು ನನ್ನ ಪಾಲಿಗೆ ಅದ್ಭುತ ರೋಮಾಂಚನವಾಗಿದೆ. ನನ್ನ ವೃತ್ತಿಜೀವನದಲ್ಲಿ ಇದು ಹೊಸ ಅಧ್ಯಾಯವಾಗಿದೆ. ನಾನು ಈ ಪಾತ್ರದ ಬಗ್ಗೆ ನಿಜಕ್ಕೂ ಕಾತುರನಾಗಿದ್ದೇನೆ. ನನ್ನ ಅನುಭವದ ಆಳವು ತಂಡದ ಬೆಳವಣಿಗೆಗೆ ಕೊಡುಗೆ ನೀಡಿ, ಮೌಲ್ಯವರ್ಧನೆಯನ್ನು ತರಬಹುದು ಎಂದು ಆಶಿಸುತ್ತೇನೆ” ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…