Featured

ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ – vishwanews24

ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ

ಬೆಂಗಳೂರು: ಮಾಜಿ ಭಾರತೀಯ ಆಟಗಾರ ದಿನೇಶ್ ಕಾರ್ತಿಕ್ ಅವರನ್ನು ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ನೇಮಿಸಲಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಆರ್‌ಸಿಬಿ, “ಆರ್‌ಸಿಬಿ ಹೊಂದಿರುವ ಅತ್ಯುತ್ತಮ ಬ್ಯಾಟಿಂಗ್ ಕ್ರಮಾಂಕಕ್ಕೆ ದಿನೇಶ್ ಕಾರ್ತಿಕ್ ತಮ್ಮ ಅನುಭವ ಹಾಗೂ ತಂಡದ ತಾತ್ವಿಕತೆಯ ಬಗೆಗಿನ ಆಳವಾದ ತಿಳಿವಳಿಕೆಯಿಂದ ತಂಡಕ್ಕೆ ಆಸ್ತಿಯಾಗಲಿದ್ದಾರೆ” ಎಂದು ಹೇಳಿದೆ.

“ಕಾರ್ತಿಕ್ ಮೊದಲಿಗೆ 2015 ಹಾಗೂ 2016ರಲ್ಲಿ ಆರ್‌ಸಿಬಿ ತಂಡದ ಪರವಾಗಿ ಆಡಿದ್ದರು.‌ 2024ರ ಋತುವಿನ 15 ಪಂದ್ಯಗಳಲ್ಲಿ 187.36 ಸ್ಟ್ರೈಕ್ ರೇಟ್‌ನೊಂದಿಗೆ ಅವರು 326 ರನ್ ಗಳಿಸಿದ್ದರು. ಆದರೆ, ಅವರ ಪ್ರಭಾವವು ಅವರು ಗಳಿಸಿದ ರನ್‌ಗಳ ಸಂಖ್ಯೆಯನ್ನೂ ಮೀರಿದೆ” ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ತಮ್ಮ ನೇಮಕದ ಕುರಿತು ಪ್ರತಿಕ್ರಿಯಿಸಿರುವ ದಿನೇಶ್ ಕಾರ್ತಿಕ್, “ವೃತ್ತಿಪರ ಹಂತದಲ್ಲಿ ತರಬೇತಿ ನೀಡುವುದು ನನ್ನ ಪಾಲಿಗೆ ಅದ್ಭುತ ರೋಮಾಂಚನವಾಗಿದೆ. ನನ್ನ ವೃತ್ತಿಜೀವನದಲ್ಲಿ ಇದು ಹೊಸ ಅಧ್ಯಾಯವಾಗಿದೆ. ನಾನು ಈ ಪಾತ್ರದ ಬಗ್ಗೆ ನಿಜಕ್ಕೂ ಕಾತುರನಾಗಿದ್ದೇನೆ. ನನ್ನ ಅನುಭವದ ಆಳವು ತಂಡದ ಬೆಳವಣಿಗೆಗೆ ಕೊಡುಗೆ ನೀಡಿ, ಮೌಲ್ಯವರ್ಧನೆಯನ್ನು ತರಬಹುದು ಎಂದು ಆಶಿಸುತ್ತೇನೆ” ಎಂದು ಹೇಳಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

14 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

15 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

15 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

15 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

16 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

16 hours ago