ಮುಂಬೈ: ಮುಂಬರುವ ಋತುಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದರೆ ಗೆಲುವಿನ ‘ಶ್ರೇಯ’ ಎಬಿ ಡಿವಿಲಿಯರ್ಸ್‌ಗೆ ಸಲ್ಲುತ್ತದೆ ಎಂದು ಮಾಜಿ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಆರ್‌ಸಿಬಿ ಬೋಲ್ಡ್ ಡೈರಿಸ್‌ನಲ್ಲಿ ಮಾತನಾಡಿರುವ ಕೊಹ್ಲಿ ‘ಮುಂಬರುವ ಋತುಗಳಲ್ಲಿ ನಾವು (ಆರ್‌ಸಿಬಿ) ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾದರೆ, ಆ ಶ್ರೇಯ ಡಿವಿಲಿಯರ್ಸ್‌ಗೂ ಸಲ್ಲುತ್ತದೆ. ಗೆಲುವಿನ ಬಳಿಕ ಮೊದಲು ಮನಸ್ಸಿನಲ್ಲಿ ಸುಳಿಯುವುದೂ ಅವರೇ..’ ಎಂದು ಹೇಳಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾದ ಕ್ರಿಕೆಟ್ ದಂತ ಕಥೆ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್‌ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. 2011ರಿಂದ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡಲು ಆರಂಭಿಸಿದ್ದ ಅವರು, ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಇತರೆ ಆಟಗಾರರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ.
ಇಷ್ಟು ವರ್ಷಗಳ ಕಠಿಣ ಪರಿಶ್ರಮದ ನಂತರ ನಾನು ಆಟವನ್ನು ಅನುಭವಿಸುವುದರ ಜತೆಗೆ, ಡಿವಿಲಿಯರ್ಸ್ ಬಗ್ಗೆಯೂ ಯೋಚಿಸುತ್ತೇನೆ ಎಂದು ತಿಳಿಸಿದ್ದಾರೆ.
ಡಿವಿಲಿಯರ್ಸ್ ಮನೆಯಿಂದ ಐಪಿಎಲ್ ವೀಕ್ಷಿಸುತ್ತಿದ್ದರೂ ಸಹ ಅದು ಅವರಿಗೆ ಬಹಳಷ್ಟು ಅರ್ಥವನ್ನು ನೀಡುತ್ತದೆ. ಅವರು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ವಿಶೇಷ ವ್ಯಕ್ತಿಯಾಗಿದ್ದರು ಎಂದು ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…