Featured

ಆರ್ ಎಸ್ ಎಸ್ ಅನ್ನು ಮುಸ್ಲಿಂ ಬ್ರದರ್ ಹುಡ್ ಗೆ ಹೋಲಿಕೆ ಮಾಡಿದ ರಮ್ಯಾಳಿಗೆ ಖಡಕ್ ಎಚ್ಪರಿಕೆ ನೀಡಿದ ನವರಸ ನಾಯಕ

“ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ಮುಸ್ಲಿಂ ಬ್ರದರ್ ಹುಡ್ ಸಂಘಟನೆಯಿದ್ದಂತೆ. ಆ ಸಂಘಟನೆ ಹುಟ್ಟಿದ್ದು 1920ಕ್ಕೆ ಹಾಗೂ ಸಂಘ ಹುಟ್ಟಿದ್ದೂ 1920ಕ್ಕೆ. ಆ ಸಂಘಟನೆಯೂ ಜಾತ್ಯಾತೀತ ರಾಷ್ಟ್ರವನ್ನು ಒಪ್ಪುತ್ತಿಲ್ಲ, ಸಂಘವೂ ಜಾತ್ಯಾತೀತ ರಾಷ್ಟ್ರವನ್ನು ಒಪ್ಪುತ್ತಿಲ್ಲ, ಆ ಸಂಘಟನೆಯ ಹುರಿ ಇಸ್ಲಾಮೀಕರಣ ಸಂಘದ ಗುರಿ ಹಿಂದೂರಾಷ್ಟ್ರ” ಹೀಗೆ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ  ಒಂದು ಟ್ವೀಟ್ ಮಾಡಿದ್ದರು.

ಸಂಘದ ತಂಟೆಗೆ ಈ ರಮ್ಯಾ ಬಂದಿದ್ದೇ ತಡ ಭಾರತೀಯ ಜನತಾ ಪಕ್ಷದ ನಾಯಕ ಹಾಗೂ ನವರಸ ನಾಯಕ ಜಗ್ಗೇಶ್ ಕಿಡಿ ಕಾರಿದ್ದಾರೆ. ರಮ್ಯಾಗೆ ಕೌಂಟರ್ ಕೊಡುವ ಮೂಲಕ ಆಕೆಯ ಸುಳ್ಳನ್ನು ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್ ಮೊದಲು ಇತಿಹಾಸ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. “ಯಾರಿಗೆ ವಸ್ತುಸ್ಥಿತಿ ಅನುಭವದ ಕೊರತೆ ಇರುತ್ತೋ ಅಂಥವರು ಬೇಜವಬ್ಧಾರಿ ಹೇಳಿಕೆಗಳನ್ನು ನೀಡುತ್ತಾರೆ..ಕೇರಳ, ಕೊಡಗಿನ ಮಳೆ ಅವಾಂತರಕ್ಕೆ ಭುಜಕೊಟ್ಟಿದ್ದು ಸಂಘವೇ ವಿನಹ ಇಂಥಹಾ ಬಾಲಿಷ ಹೇಳಿಕೆ ಕೊಡುವವರಲ್ಲಾ. ಅಂದೇ ನೆಹರೂ ಸಂಘದ ಕಾರ್ಯವೈಖರಿಯನ್ನು ಮೆಚ್ಚಿ ಹೊಗಳಿದ್ದರು.. ಓದಲು ಬಂದರೆ ಇತಿಹಾಸ ಪುಟ ತಿರುಗಿಸಿ ಓದಲು ಹೇಳಿ,, ಆಗಲೂ ತಿಳಿಯದಿದ್ದರೆ ಕ್ಯಾಚ್ ಆಫೀಸರ್ ಕಂಟಿನ್ಯೂ” ಎಂದು ಜಗ್ಗೇಶ್ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ.

ಈ ಹಿಂದೆ ಸಂಘದ ವಿರುದ್ಧ ಮಾತನಾಡಿ ಕೋರ್ಟ್ ಕಟಕಟೆಯೇರಿದ್ದ ರಾಹುಲ್ ಗಾಂಧಿ ಇದೀಗ ಮತ್ತೊಮ್ಮೆ ತಾನೂ ಸಾಲದು ಎಂಬಂತೆ ರಮ್ಯಾರನ್ನೂ ಕೋರ್ಟ್ ಮೆಟ್ಟಿಲೇರಿಸುವ ವ್ಯವಸ್ಥೆಯನ್ನು ಕಲ್ಪಿಸುತ್ತಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

8 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

10 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

10 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

10 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

11 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

11 hours ago