ಕೊಪ್ಪಳ: ಆರ್‌ಎಸ್‌ಎಸ್ ಗೆ ಹಾಗೂ ಕುಮಾರಸ್ವಾಮಿಗೆ ನನ್ನ ಕಂಡರೆ ಭಯವಿದೆ. ಅದಕ್ಕೆ ಅವರು ನನ್ನ ಬಗ್ಗೆ ಪದೇ ಪದೇ ಮಾತಾಡುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಕೊಪ್ಪಳ ತಾಲ್ಲೂಕಿನ ಬಸಾಪೂರ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರ ಜೊತೆ ಮಾತನಾಡಿ, ಅವರಿಬ್ಬರಿಗೂ ನನ್ನ ಕಂಡರೆ ಭಯ ಅದಕ್ಕೆ ನನ್ನ ಟಾರ್ಗೆಟ್ ಮಾಡಿ ಮಾತನಾಡುತ್ತಾರೆ ಎಂದರು.
ಕುಮಾರಸ್ವಾಮಿ ಸಿಎಂ ಆಗುತ್ತೇನೆ ಎಂಬ ಹೇಳಿಕೆ ವಿಚಾರ, ಜನ ಆಶೀರ್ವಾದ ಮಾಡಬೇಕು. ನಾವೇ ಹೋಗಿ ಕುಳಿಕೊಳ್ಳಲು ಆಗುತ್ತಾ? ಎಂದ ಅವರು ಶಿಕ್ಷಕರ ಚುನಾವಣೆಯಲ್ಲಿ ಜೆಡಿಎಸ್ ಯಾವ ಸ್ಥಾನದಲ್ಲಿದೆ? ಅಂತಹ ಪಾರ್ಟಿ ಅಧಿಕಾರಕ್ಕೆ ಬರುತ್ತದೆಯೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಮಹಾರಾಷ್ಟ್ರದಲ್ಲಿ ನಾವು ಅಧಿಕಾರ ಕಳೆದುಕೊಂಡಿಲ್ಲ. ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವಂತೆ ಬಿಜೆಪಿಗರು ಮಾಡುತ್ತಿದ್ದಾರೆ. ಆಪರೇಷನ್ ಕಮಲ ಮಾಡಿ ಮಹಾರಾಷ್ಟ್ರ ಸರ್ಕಾರ ಬೀಳಿಸುತ್ತಿದ್ದಾರೆ. ಬಿಜೆಪಿಗರು ಆಪರೇಷನ್ ಕಮಲ ಮಾಡ್ತಿರೋದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಇವರು ತುಂಬಾ ಪ್ರಜಾಪ್ರಭುತ್ವದ ಬಗ್ಗೆ ಮಾತಾಡ್ತಾರೆ. ಇಂದಿರಾಗಾಂಧಿ ತುರ್ತು ಪರಿಸ್ಥಿತಿ ತಂದರು, ಕಪ್ಪು ಚುಕ್ಕೆ ಎನ್ನುತ್ತಾರೆ. ಆದರೆ, ಇವರು ಮಾಡುತ್ತಿರುವುದು ಏನು ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಮಧ್ಯ ಪ್ರದೇಶದ ಸರ್ಕಾರ ಕಿತ್ತು ಹಾಕಿದ್ದು ಯಾರು? ಕರ್ನಾಟಕದ ಸಮ್ಮಿಶ್ರ ಸರ್ಕಾರ ಕಿತ್ತಾಕಿದ್ದು ಯಾರು? ಪಾಪದ ಹಣ ಅವರ ಬಳಿ ಇದೆ, ಲೂಟಿ ಹೊಡೆದ ಹಣ ಇದೆ. ಒಬ್ಬೊಬ್ಬ ಶಾಕರಿಗೆ 25- 30 ಕೋಟಿ ಕೊಟ್ಟು ಖರೀದಿ ಮಾಡುತ್ತಿದ್ದಾರೆ. ಶಾಸಕರೆಲ್ಲ ಸುಮ್ಮನೇ ಬರ್ತಾರಾ? ಅಧಿಕಾರ ಇದೆಯಲ್ಲ ಎಲ್ಲ ಕಡೆ ಕಾಂಗ್ರೆಸ್ ಸರ್ಕಾರ ಕಿತ್ತು ಹಾಕುತ್ತಿದ್ದಾರೆ. ಕೇಂದ್ರದಲ್ಲಿ ಅಧಿಕಾರ ಇದೆ, ದುಡ್ಡಿದೆ ಅದಕ್ಕಾಗಿ ಎಲ್ಲ ಸರ್ಕಾರ ಬೀಳಿಸುತ್ತಿದ್ದಾರೆ ಎಂದು ಆರೋಪಿಸಿದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…