Featured

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವದ ಪಯಣದಲ್ಲಿಯೂ ಅನೇಕ ಟೀಕೆ, ಪ್ರಶ್ನೆಗಳು ಹಾಗೂ ಎರಡು ಬಾರಿ ನಿಷೇಧದಂತಹ ಸವಾಲುಗಳನ್ನು ಎದುರಿಸಿದ್ದರೂ, ತನ್ನ ಕಾರ್ಯಸೂಚಿಗಳನ್ನು ಮುಂದುವರಿಸಿಕೊಂಡು ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ ಎಂದು ಹಿಂದೂ ಸಂಘಟನೆಯ ನಾಯಕ ಸತ್ಯಜಿತ್ ಸುರತ್ಕಲ್ ಹೇಳಿದರು .

ಅವರು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ , ಸಂಘದ ಬಗ್ಗೆ ಯಾರೇ ಪ್ರಶ್ನೆ ಕೇಳಿದರೂ ಅದು ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಾಗಿದ್ದು, ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಹಿಂದೆ ಸಂಘದ ವಿರುದ್ಧ ಟೀಕೆಗಳು ಅಥವಾ ಪ್ರಶ್ನೆಗಳು ಉದ್ಭವಿಸಿದಾಗ ಸಮಾಜವೇ ಅದಕ್ಕೆ ಉತ್ತರ ನೀಡುತ್ತಿತ್ತು. ಸಂಘವನ್ನು ಸಮಾಜ ತನ್ನದೇ ಸಂಘಟನೆ ಎಂಬ ರೀತಿಯಲ್ಲಿ ಸ್ವೀಕರಿಸಿತ್ತು ಎಂದು ಅವರು ಹೇಳಿದರು.

ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಘದ ನೋಂದಣಿ ಹಾಗೂ ಹಿಂದುತ್ವದ ವಿಚಾರವಾಗಿ ಪ್ರಶ್ನೆಗಳನ್ನು ಎತ್ತಿದ ಸಂದರ್ಭದಲ್ಲಿ, ದಕ್ಷಿಣ ಕನ್ನಡದಂತಹ ಪ್ರದೇಶಗಳಲ್ಲಿ ಸಂಘದ ಕಾರ್ಯಚಟುವಟಿಕೆಗಳಿಂದ ಲಾಭ ಪಡೆದ ರಾಜಕೀಯ ನಾಯಕರು ನಿರೀಕ್ಷಿತ ರೀತಿಯಲ್ಲಿ ಪ್ರತಿಕ್ರಿಯೆ ನೀಡಿಲ್ಲ ಎಂಬ ಇಂಗಿತ ವ್ಯಕ್ತಪಡಿಸಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಘದ ಕಾರ್ಯಚಟುವಟಿಕೆಗಳ ಪ್ರಯೋಗಶಾಲೆ ಎಂದು ಕರೆಯಲಾಗುತ್ತದೆ. ಕಳೆದ ಹಲವು ದಶಕಗಳಿಂದ ಸಂಘದ ಕಾರ್ಯಕರ್ತರ ಪರಿಶ್ರಮ ಮತ್ತು ಹಿಂದುತ್ವದ ವಿಚಾರಧಾರೆಯ ಪರಿಣಾಮವಾಗಿ ಈ ಭಾಗದಲ್ಲಿ ರಾಜಕೀಯ ಯಶಸ್ಸು ಸಾಧ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಹಿಂದೆ ಸಂಘದ ಪರವಾಗಿ ಸಮಾಜದ ವಿವಿಧ ವಲಯಗಳು ಸ್ಪಷ್ಟವಾಗಿ ಧ್ವನಿಯಾಗುತ್ತಿದ್ದವು. ಆದರೆ ಈಗ ಆ ಮನೋಭಾವದಲ್ಲಿ ಬದಲಾವಣೆ ಕಂಡುಬರುತ್ತಿದೆ. ಸಂಘವನ್ನು ‘ಓನ್ ಅಪ್’ ಮಾಡಿಕೊಳ್ಳುವವರ ಸಂಖ್ಯೆ ಕಡಿಮೆಯಾಗಿದೆಯೇ ಅಥವಾ ಸಮಾಜದ ಕೆಲವು ವರ್ಗಗಳಲ್ಲಿ ಅಸಮಾಧಾನವಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸುತ್ತಿವೆ ಎಂದು ಹೇಳಿದರು.

ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗಳಿಗೆ ಸಂಘವು ಕಾನೂನುಬದ್ಧವಾಗಿ ಉತ್ತರ ನೀಡುವ ಸಾಮರ್ಥ್ಯ ಹೊಂದಿದೆ. ಆದರೆ ಸಮಾಜದಲ್ಲಿ ಸಂಘದ ಬಗ್ಗೆ ರೂಪುಗೊಳ್ಳುತ್ತಿರುವ ಹೊಸ ಮನಸ್ಥಿತಿಯ ಬಗ್ಗೆ ಸಂಘದ ಹಿರಿಯರು ಆತ್ಮಾವಲೋಕನ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಎಂಬ ಸಂಘದ ಮೂಲ ಸಿದ್ಧಾಂತ ಇಂದಿಗೂ ಪ್ರಸ್ತುತವಾಗಿದೆ. ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಸಮರ್ಪಿತ ವ್ಯಕ್ತಿಗಳ ನಿರ್ಮಾಣ ಅನಿವಾರ್ಯವಾಗಿದ್ದು, ಈ ಕಾರ್ಯದಲ್ಲಿ ಯಾವುದೇ ನ್ಯೂನತೆ ಬರಬಾರದು. ಸಮಾಜದ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವ ದಿಸೆಯಲ್ಲಿ ಸಂಘ ಮುಂದಿನ ದಿನಗಳಲ್ಲಿ ಗಮನಹರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

20 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

21 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

21 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

24 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

24 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago