ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಕಳೆದ ಹತ್ತು ದಿನಗಳಿಂದ ಮುಷ್ಕರ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ವಿರುದ್ಧ ಆರೋಗ್ಯ ಸಚಿವ ಯು.ಟಿ. ಖಾದರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಸೇವೆ ಇಲ್ಲದಿದ್ದರೂ ಆರೋಗ್ಯ ಇಲಾಖೆ ಸುಗಮವಾಗಿ ನಡೆಯುತ್ತದೆ ಎಂಬುದನ್ನು ಸ್ವತಃ ಆಶಾ ಕಾರ್ಯಕರ್ತೆಯರೇ ತಮ್ಮ ಪ್ರತಿಭಟನೆಯ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಸಚಿವರು ಕಿಡಿಕಾರಿದ್ದಾರೆ.
ಹತ್ತು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ರಾಜ್ಯದ ಆರೋಗ್ಯ ಇಲಾಖೆಗೆ ಯಾವುದೇ ತೊಂದರೆಯಾಗಿಲ್ಲ ಮತ್ತು ಗ್ರಾಮೀಣ ಭಾಗದಲ್ಲೂ ಯಾವುದೇ ಸಮಸ್ಯೆ ಎದುರಾಗಿಲ್ಲ ಎಂದು ಖಾದರ್ ಹೇಳಿದ್ದಾರೆ.
ಪ್ರತಿಭಟನೆಯ ನಡುವೆಯೂ ಆಸ್ಪತ್ರೆಗಳಲ್ಲಿ ಹೆರಿಗೆ ಸೇರಿದಂತೆ ಎಲ್ಲಾ ವೈದ್ಯಕೀಯ ಸೇವೆಗಳು ಎಂದಿನಂತೆ ನಡೆಯುತ್ತಿವೆ. ಆಶಾ ಕಾರ್ಯಕರ್ತೆಯರು ಇದ್ದರೂ ಇಲಾಖೆ ನಡೆಯುತ್ತದೆ, ಇಲ್ಲದಿದ್ದರೂ ನಡೆಯುತ್ತದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದಿರುವ ಸಚಿವರು, ಆಶಾಗಳಿಲ್ಲದಿದ್ದರೆ ವೈದ್ಯರು ಮತ್ತು ನರ್ಸ್‌ಗಳಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಆಶಾ ಕಾರ್ಯಕರ್ತೆಯರಿದ್ದರೂ ಪರಿಸ್ಥಿತಿ ಹೀಗಿದೆ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ವೇತನ ತಾರತಮ್ಯದ ಕುರಿತು ಮಾತನಾಡಿರುವ ಸಚಿವರು, ನರ್ಸ್‌ಗಳಿಗೆ ₹10,000, ಶಿಕ್ಷಕರಿಗೆ ₹12,000 ಹಾಗೂ ಆರೋಗ್ಯ ಸಹಾಯಕರಿಗೆ ₹4,500 ವೇತನ ನೀಡಲಾಗುತ್ತಿದೆ; ಹೀಗಿರುವಾಗ ಆಶಾ ಕಾರ್ಯಕರ್ತೆಯರಿಗೆ ₹15,000 ವೇತನ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ಸಕ್ಕರೆ, ಉಪ್ಪು ಮತ್ತು ಕೊಬ್ಬಿನ ಆಹಾರ ಗುರುತಿಸಲು ಪ್ಯಾಕೇಜ್‌ಗಳ ಮೇಲೆ ಸ್ಪಷ್ಟವಾದ ಎಚ್ಚರಿಕೆ ಲೇಬಲ್ ಕಡ್ಡಾಯ : ಸುಪ್ರೀಂ ಆದೇಶ…
ತಿರುಪತಿ ತಿಮ್ಮಪ್ಪನಿಗೆ 160 ಕೋಟಿ ಮೌಲ್ಯದ 121 ಕೆಜಿ ಚಿನ್ನ ನೀಡಿದ ಚೆನ್ನೈ ಉದ್ಯಮಿ ತಿರುಮಲ : ಆಂಧ್ರಪ್ರದೇಶದ ಮುಖ್ಯಮಂತ್ರಿ…
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಗ್‌ಬಾಸ್ ಖ್ಯಾತಿಯ ನಟಿ ಅನುಷಾ ರೈ ಕಾಪು : ಬಿಗ್‌ಬಾಸ್…
ಕುಂದಾಪುರ : ದೇವಸ್ಥಾನದಲ್ಲಿ ಮಹಿಳೆಯ ಕರಿಮಣಿ ಸರ ಕಳವು ಪ್ರಕರಣ ; ನಾಲ್ವರು ಮಹಿಳೆಯರ ಸಹಿತ ಐವರ ಬಂಧನ ಕುಂದಾಪುರ:…
ಸೌಜನ್ಯಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳೇ ನಮಗೆ ನ್ಯಾಯ ಕೊಡಿಸಬೇಕು : ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹ ಮಂಗಳೂರು : ಸೌಜನ್ಯಾ ಪ್ರಕರಣದಲ್ಲಿ…
ಸರ್ಕಾರವನ್ನು ಹೆದರಿಸುವ ಕೆಲಸ ಮಾಡಬಾರದು ; ತಾಳ್ಮೆಯಿಂದ ಹೋರಾಟ ವಾಪಸ್ ತೆಗೆದುಕೊಳ್ಳಿ : ಆಶಾ ಕಾರ್ಯಕರ್ತೆಯರಿಗೆ ಸಿಎಂ ಮನವಿ ಬೆಂಗಳೂರು:…