Featured

ಆಶಾ ಕಾರ್ಯಕರ್ತೆಯರ ಸೇವೆಯನ್ನು ಆರೋಗ್ಯ ಸಚಿವರು ಅವಮಾನಿಸುತ್ತಿರುವುದು ಖಂಡನೀಯ : ಯಶ್ ಪಾಲ್ ಸುವರ್ಣ ಆಕ್ರೋಶ – vishwanews24

ಆಶಾ ಕಾರ್ಯಕರ್ತೆಯರ ಸೇವೆಯನ್ನು ಆರೋಗ್ಯ ಸಚಿವರು ಅವಮಾನಿಸುತ್ತಿರುವುದು ಖಂಡನೀಯ..

ಆಶಾ ಕಾರ್ಯಕರ್ತರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ ಸಚಿವ ಖಾದರ್ ತಕ್ಷಣ ಕ್ಷಮೆ ಯಾಚಿಸಬೇಕು : ಯಶ್ ಪಾಲ್ ಸುವರ್ಣ ಆಕ್ರೋಶ

ಉಡುಪಿ: ಕಳೆದ ಹತ್ತು ದಿನಗಳಿಂದ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸಿದರೂ ಸ್ಪಂದಿಸದ ರಾಜ್ಯ ಸರ್ಕಾರ, ಇದೀಗ ಆಶಾ ಕಾರ್ಯಕರ್ತೆಯರ ಸೇವೆಯನ್ನೇ ಅವಮಾನಿಸುವ ರೀತಿಯಲ್ಲಿ ರಾಜ್ಯದ ಆರೋಗ್ಯ ಸಚಿವ ಯು ಟಿ ಖಾದರ್ ಆಶಾ ಕಾರ್ಯಕರ್ತೆಯರು ಇದ್ದರೂ ಇಲ್ಲದಿದ್ದರೂ ನಡೆಯುತ್ತೆ ಎಂಬ ಬೇಜವಾಬ್ದಾರಿ ಹೇಳಿಕೆ ಆಶಾ ಕಾರ್ಯಕರ್ತೆಯರ ಬಗ್ಗೆ ರಾಜ್ಯ ಸರ್ಕಾರದ ಮನಸ್ಥಿತಿಯನ್ನು ಬಯಲು ಮಾಡಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೋನಾ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಮನೆ ಮನೆಗೆ ತೆರಳಿ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದ ಆಶಾ ಕಾರ್ಯಕರ್ತೆಯರ ಸೇವೆಯನ್ನು ಒಬ್ಬ ಆರೋಗ್ಯ ಸಚಿವನೇ ಅವಮಾನಿಸುತ್ತಿರುವುದು ಖಂಡನೀಯ.

ಅಧಿಕಾರಕ್ಕೆ ಬರುವ ಮುನ್ನ ಇದೇ ಆಶಾ ಕಾರ್ಯಕರ್ತೆಯರಿಗೆ ವೇತನ ಏರಿಕೆ ಮಾಡುವ ಆಶ್ವಾಸನೆ ನೀಡುವಾಗ ಆಶಾ ಕಾರ್ಯಕರ್ತೆಯರ ಬಗ್ಗೆ ಇದ್ದ ಕಾಳಜಿ ಕಾಂಗ್ರೆಸ್ ಪಕ್ಷಕ್ಕೆ ಇದೀಗ 3 ವರ್ಷದಲ್ಲಿ ಈಗ ಮಾಯವಾಯಿತೇ.

ವಿನಾಶ ಕಾಲಕ್ಕೆ ವಿಪರೀತ ಬುದ್ಧಿ ಎಂಬಂತೆ ಸಚಿವ ಖಾದರ್ ಅತಿರೇಕದ ಹೇಳಿಕೆ ನೀಡಿದ್ದು, ಮೊನ್ನೆ ಮಂಡ್ಯದಲ್ಲಿ ಸಚಿವ ನರೇಂದ್ರ ಸ್ವಾಮಿ ಕೇಳಿದಾಗಲೆಲ್ಲ ಕಂಠಿ ಹಾರ ನೀಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಆಶಾ ಕಾರ್ಯಕರ್ತೆಯರಿಗೆ ಅಪಮಾನ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ಆಶಾ ಕಾರ್ಯಕರ್ತ ಸಹೋದರಿಯರ ಪ್ರತಿಭಟನೆಯ ಬಿಸಿ ತಟ್ಟಿದ್ದು, ಇದೀಗ ರಾಜ್ಯದ ಸಚಿವರೇ ಹತಾಶರಾಗಿ ಹೇಳಿಕೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಿದ ಸಚಿವ ಖಾದರ್ ತಕ್ಷಣ ಕ್ಷಮೆ ಯಾಚಿಸಬೇಕು ಎಂದು ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಸುಳ್ಯ : ಕಾರು-ಬೈಕ್ ಅಪಘಾತ ; ಬೈಕ್ ಸವಾರ ಮೃತ್ಯು -vishwanews24

ಸುಳ್ಯ : ಕಾರು-ಬೈಕ್ ಅಪಘಾತ ; ಬೈಕ್ ಸವಾರ ಮೃತ್ಯು ಸುಳ್ಯ : ಕಾರು ಮತ್ತು ಬೈಕ್ ಅಪಘಾತವಾಗಿ ಬೈಕ್…

1 hour ago

ನ.29ರಂದು ಉಡುಪಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ -vishwanews24

ನ.29ರಂದು ಉಡುಪಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ಉಡುಪಿ : ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ…

4 hours ago

ಉಡುಪಿ: ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ರಾಜೇಶ್ ಕೇಶವ ಆಚಾರ್ಯ ಯುಎಎಇ ಯಿಂದ ಭಾರತಕ್ಕೆ ಗಡಿಪಾರು -vishwanews24

ಉಡುಪಿ: ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ರಾಜೇಶ್ ಕೇಶವ ಆಚಾರ್ಯ ಯುಎಎಇ ಯಿಂದ ಭಾರತಕ್ಕೆ ಗಡಿಪಾರು ಮುಂಬೈ ವಿಮಾನ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟ್‌ನಿಂದ ಐವರ ಜಾಮೀನು ರದ್ದು ಅರ್ಜಿ ವಜಾ -vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟ್‌ನಿಂದ ಐವರ ಜಾಮೀನು ರದ್ದು ಅರ್ಜಿ ವಜಾ ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ…

24 hours ago

ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳ ಸರಕಾರಿ ಕಚೇರಿಗಳಲ್ಲಿ ತುಳುವಿಗೆ ಅಧಿಕೃತ ಸ್ಥಾನ -vishwanews24

ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳ ಸರಕಾರಿ ಕಚೇರಿಗಳಲ್ಲಿ ತುಳುವಿಗೆ ಅಧಿಕೃತ ಸ್ಥಾನ ಸಾರ್ವಜನಿಕರು ಇನ್ನು ಮುಂದೆ ತುಳು ಭಾಷೆಯಲ್ಲೇ…

1 day ago

ಮಂಗಳೂರು: ನ.30 ರಂದು ಸಂತ ಅಲೋಶಿಯಸ್ ವಿವಿಯಲ್ಲಿ ಬೃಹತ್ ಉದ್ಯೋಗ ಮೇಳ -vishwanews24

 ಮಂಗಳೂರು: ನ.30 ರಂದು ಸಂತ ಅಲೋಶಿಯಸ್ ವಿವಿಯಲ್ಲಿ ಬೃಹತ್ ಉದ್ಯೋಗ ಮೇಳ ಈಗಾಗಲೇ 10,000ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳ ನೋಂದಣಿ ಮಂಗಳೂರು:…

1 day ago