ಮಂಗಳೂರು: ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಇಲ್ಲಿನ ಎ.ಜೆ.ಆಸ್ಪತ್ರೆಯಲ್ಲಿ ಮಂಗಳವಾರ ಭೇಟಿ ಮಾಡಿ ಸಾಂತ್ವನ ಹೇಳಿದರು.
ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಆ್ಯಸಿಡ್ ದಾಳಿ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಕ್ಷಣ ತಲಾ 4 ಲಕ್ಷ ರೂಪಾಯಿ ಚಿಕಿತ್ಸಾ ಪರಿಹಾರವಾಗಿ ಬಿಡುಗಡೆ ಮಾಡಲಾಗುತ್ತದೆ. ವಿದ್ಯಾರ್ಥಿನಿಯರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ತೀವ್ರ ಗಾಯವಾಗಿದೆ. ಅವರಿಗೆ ವಾರದ ಬಳಿಕ ಪ್ಲಾಸ್ಟಿಕ್ ಸರ್ಜರಿ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ. ಪ್ಲಾಸ್ಟಿಕ್ ಸರ್ಜರಿ ಗೆ 20 ಲಕ್ಷದ ವರೆಗೆ ಚಿಕಿತ್ಸಾ ಪರಿಹಾರವನ್ನು ಸರ್ಕಾರ ಭರಿಸಲಿದೆ” ಎಂದು ಭರವಸೆ ನೀಡಿದ್ದಾರೆ.
“ವೈದ್ಯರನ್ನು ಹಾಗೂ ಸಂತ್ರಸ್ತ ವಿದ್ಯಾರ್ಥಿನಿಯರ ಪೋಷಕರನ್ನು ನಾನು ಭೇಟಿ ಮಾಡಿದ್ದೇನೆ. ಆ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಯ ಬಗ್ಗೆ ಆತಂಕಗೊಂಡು ವಿಚಾರಿಸುತ್ತಿದ್ದಾರೆ. ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ವ್ಯವಸ್ಥೆ ಮಾಡುತ್ತೇವೆ. ಈ ಕುರಿತು ನಾನು ಶಿಕ್ಷಣ ಇಲಾಖೆಯ ಸಚಿವರೊಂದಿಗೆ ಚರ್ಚಿಸುತ್ತೇನೆ. ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿನಿಯರು ಸಂಪೂರ್ಣವಾಗಿ ಗುಣಮುಖರಾಗುವುದು ಬಹಳ ಮುಖ್ಯವಾಗಿದೆ. ಆರೋಪಿ ಆ್ಯಸಿಡ್ ನ್ನು ಪ್ಲಾಸ್ಟಿಕ್ ಬಾಟಲ್ ನಲ್ಲಿ ತಂದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ್ಯಸಿಡ್ ತೀವ್ರ ಪ್ರಮಾಣದ್ದು ಆಗಿದ್ದರೆ ದೊಡ್ಡ ಮಟ್ಟದ ಗಾಯವಾಗುತ್ತಿತ್ತು. ಎಲ್ಲಾ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…
ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…
ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…
ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…