‘ವಿಲ್ ಸ್ಮಿತ್ ಅವರ ರಾಜೀನಾಮೆಯನ್ನು ಅಂಗೀಕರಿಸುವುದರ ಜೊತೆಗೆ ಏಪ್ರಿಲ್ 8, 2022 ರಿಂದ 10 ವರ್ಷಗಳ ಅವಧಿಗೆ ಆಸ್ಕರ್ ಪ್ರಶಸ್ತಿ ಸಮಾರಂಭಗಳಿಗೆ ಭೌತಿಕ ಮತ್ತು ವರ್ಚುವಲ್ ಆಗಿ ಹಾಜರಾಗಲು ಅನುಮತಿ ನೀಡದಿರಲು ಮಂಡಳಿಯ ಸಭೆ ನಿರ್ಧರಿಸಿದೆ’ ಎಂದು ಅಧ್ಯಕ್ಷ ಡೇವಿಡ್ ರೂಬಿನ್ ಮತ್ತು ಸಿಇಒ ಡಾನ್ ಹಡ್ಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ಆಸ್ಕರ್ ಪ್ರಶಸ್ತಿ ಸಮಾರಂಭವು ಹಿಂದಿನ ವರ್ಷ ಸಿನಿಮಾ ರಂಗದಲ್ಲಿ ಅಸಾಧಾರಣ ಕೆಲಸ ಮಾಡಿದ ವ್ಯಕ್ತಿಗಳ ಸಂಭ್ರಮದ ಕ್ಷಣವಾಗಿತ್ತು. ಅಂತಹ ಕ್ಷಣಗಳನ್ನು ಹಾಳುಮಾಡಿದ ಸ್ಮಿತ್ ಅವರ ವರ್ತನೆಯು ಸ್ವೀಕಾರರ್ಹವಲ್ಲ’ ಎಂದು ಅಕಾಡೆಮಿ ಹೇಳಿಕೆಯಲ್ಲಿ ತಿಳಿಸಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವವ ಸ್ಮಿತ್, ‘ನಾನು ಅಕಾಡೆಮಿಯ ನಿರ್ಧಾರವನ್ನು ಸ್ವೀಕರಿಸುತ್ತೇನೆ ಮತ್ತು ಗೌರವಿಸುತ್ತೇನೆ‘ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ನೀಡಿದ್ದ ಹೇಳಿಕೆಯಲ್ಲಿ ನಟ ರಾಕ್, ನಿರ್ಮಾಪಕರು, ನಾಮನಿರ್ದೇಶಿತರು ಮತ್ತು ವೀಕ್ಷಕರಿಗೆ ತಮ್ಮ ವರ್ತನೆ ಕುರಿತಂತೆ ಸ್ಮಿತ್ ಕ್ಷಮೆಯಾಚಿಸಿದ್ದರು.
ಚಲನಚಿತ್ರ ಜಗತ್ತಿನ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ಆಸ್ಕರ್ ಸೇರಿದಂತೆ ಇತರ ಎಲ್ಲಾ ಅಕಾಡೆಮಿ ಕಾರ್ಯಕ್ರಮಗಳಿಂದ ಸ್ಮಿತ್ ಅವರನ್ನು 10 ವರ್ಷಗಳವರೆಗೆ ನಿಷೇಧಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…