ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪತ್ನಿ ಬಗ್ಗೆ ಜೋಕ್ : ನಿರೂಪಕನ ಕೆನ್ನೆಗೆ ಬಾರಿಸಿದ ನಟ ವಿಲ್ ಸ್ಮಿತ್; ವಿಡಿಯೋ ವೈರಲ್ – Vishwanews24
ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪತ್ನಿ ಬಗ್ಗೆ ಜೋಕ್ ನಿರೂಪಕನ ಕೆನ್ನೆಗೆ ಬಾರಿಸಿದ ನಟ ವಿಲ್ ಸ್ಮಿತ್; ವಿಡಿಯೋ ವೈರಲ್
ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ನಟ ವಿಲ್ ಸ್ಮಿತ್ ಅವರು ಎರಡು ಕಾರಣಕ್ಕಾಗಿ ಸುದ್ದಿ ಆಗಿದ್ದಾರೆ. ‘ಕಿಂಗ್ ರಿಚರ್ಡ್’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅವರು ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದರು. ಹಾಗೆಯೇ, ಹಾಸ್ಯ ನಟನ ಕೆನ್ನೆಗೆ ಬಾರಿಸುವ ಮೂಲಕ ಅವರು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಎಂದಿನಂತೆ ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಖುಷಿಖುಷಿಯಾಗಿ ನಡೆಯುತ್ತಿತ್ತು. ವೇದಿಕೆ ಮೇಲೆ ಹಾಸ್ಯ ನಟ ಕ್ರಿಸ್ ರಾಕ್ ಮಾತನಾಡುತ್ತಿದ್ದರು. ಅವರ ಮಾತು ವಿಲ್ ಸ್ಮಿತ್ ಪತ್ನಿ ಜೇಡಾ ಪಿಂಕೆಟ್ ಸ್ಮಿತ್ ಕಡೆಗೆ ತಿರುಗಿತು. ಜೇಡಾ ಪಿಂಕೆಟ್ ಸ್ಮಿತ್ ಬಗ್ಗೆ ಅವರು ಜೋಕ್ ಮಾಡಿದರು. ಅದನ್ನು ಕೇಳಿ ಇಡೀ ಸಭಾಂಗಣ ಜೋರಾಗಿ ನಕ್ಕಿತು. ಒಂದು ಕ್ಷಣ ವಿಲ್ ಸ್ಮಿತ್ ಕೂಡ ನಕ್ಕರು. ಆದರೆ ಅಲ್ಲಿ ಮರುಕ್ಷಣ ನಡೆದಿದ್ದು ನಿಜಕ್ಕೂ ಶಾಕಿಂಗ್. ಕೂಡಲೇ ವೇದಿಕೆ ಏರಿದ ವಿಲ್ ಸ್ಮಿತ್ ಅವರು ಕ್ರಿಸ್ ರಾಕ್ ಮುಖಕ್ಕೆ ಬಾರಿಸಿದರು. ಇಡೀ ಸಭಾಂಗಣದಲ್ಲಿ ಮೌನ ಆವರಿಸಿತು. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.
#badboys3 #gijane2 #willsmith #chrisrock #oscars #besttvever
Can't believe what I just saw live on screen pic.twitter.com/YiijPRQENt
— Guy Springthorpe (the pistol slug) (@GuySpringthorpe) March 28, 2022
ಅತ್ಯುತ್ತಮ ಡಾಕ್ಯುಮೆಂಟರಿ ಪ್ರಶಸ್ತಿಯನ್ನು ವಿತರಿಸಲು ಕ್ರಿಸ್ ರಾಕ್ ಅವರನ್ನು ವೇದಿಕೆಗೆ ಕರೆಯಲಾಗಿತ್ತು. ಈ ವೇಳೆ ಅವರು ಸುಮ್ಮನಿರಲಾರದೇ ಜೇಡಾ ಪಿಂಕೆಟ್ ಸ್ಮಿತ್ ಬಗ್ಗೆ ಕಾಮಿಡಿ ಮಾಡಿದರು. ಅದು ವಿಲ್ ಸ್ಮಿತ್ ಅವರಿಗೆ ಸರಿ ಎನಿಸಲಿಲ್ಲ. ಪತ್ನಿಯ ಬಗ್ಗೆ ಜೋಕ್ ಮಾಡಿದ್ದಕ್ಕಾಗಿ ಕ್ರಿಸ್ ರಾಕ್ ಕೆನ್ನೆಗೆ ವಿಲ್ ಸ್ಮಿತ್ ಬಾರಿಸಿದರು. ಇದನ್ನು ಕಂಡು ಎಲ್ಲರಿಗೂ ಅಚ್ಚರಿ ಆಗಿದೆ.
ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಇಂದು ಪ್ರಮಾಣ ವಚನ ಸ್ವೀಕಾರ – Vishwanews24
ಇಡೀ ಸನ್ನಿವೇಶ ಸ್ಕ್ರಿಪ್ಟೆಡ್ ಇರಬಹುದಾ? ವೇದಿಕೆಯಲ್ಲಿ ಬೇಕಂತಲೇ ಈ ರೀತಿ ನಾಟಕ ಮಾಡಿರಬಹುದಾ ಎಂಬ ಪ್ರಶ್ನೆ ಕೂಡ ಜನರ ಮನದಲ್ಲಿ ಮೂಡಿದೆ. ಒಟ್ಟಿನಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ರೀತಿ ಆಗಿದ್ದರ ಬಗ್ಗೆ ಸ್ವತಃ ವಿಲ್ ಸ್ಮಿತ್ ಅವರಿಗೂ ಬೇಸರ ಇದೆ. ಈಗ ಅವರು ಕ್ಷಮೆ ಕೇಳಿದ್ದಾರೆ. ‘ನಾನು ಅಕಾಡೆಮಿಯ ಕ್ಷಮೆ ಕೇಳುತ್ತೇನೆ. ನಾಮನಿರ್ದೇಶಕಗೊಂಡ ಎಲ್ಲರಲ್ಲೂ ಕ್ಷಮೆ ಕೇಳುತ್ತೇನೆ’ ಎಂದು ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಆ ವಿಡಿಯೋ ಕೂಡ ವೈರಲ್ ಆಗುತ್ತಿದೆ.
‘ದಿ ಐಸ್ ಆಫ್ ಟ್ಯಾಮಿ ಫೇ’ ಸಿನಿಮಾದಲ್ಲಿನ ನಟನೆಗಾಗಿ ಜೆಸ್ಸಿಕಾ ಚಾಸ್ಟೇನ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ಇದೇ ಮೊದಲ ಬಾರಿಗೆ ಮೂವರು ಮಹಿಳೆಯರು (ರೆಜಿನಾ ಹಾಲ್, ಎಮಿ ಶೂಮಾರ್, ವೊಂಡಾ ಸ್ಕೈಸ್) ಆಸ್ಕರ್ ಸಮಾರಂಭವನ್ನು ಹೋಸ್ಟ್ ಮಾಡಿದ್ದಾರೆ. ಶಾನ್ ಹೆಡರ್ ನಿರ್ದೇಶನದ ‘ಕೋಡಾ’ ಚಿತ್ರವು ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಎಸ್‌ಎಸ್‌ಎಲ್ ಸಿ ಪರೀಕ್ಷೆ : ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯಲು ಕುಳಿತ ವಿದ್ಯಾರ್ಥಿನಿಯರು – Vishwanews24
