ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ನಾಳೆ ಉಡುಪಿಗೆ ; ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಅಂತಿಮ ದರ್ಶನಕ್ಕಾಗಿ ಅವಕಾಶ -Vishwanews24
ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ನಾಳೆ ಉಡುಪಿಗೆ ; ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಅಂತಿಮ ದರ್ಶನಕ್ಕಾಗಿ ಅವಕಾಶ -Vishwanews24
ಉಡುಪಿ : ಅನಾರೋಗ್ಯದಿಂದ ನಿಧನರಾದ ಕಾಂಗ್ರೆಸ್ ನಾಯಕ ಕಾಂಗ್ರೆಸ್ನ ರಾಷ್ಟ್ರೀಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ನಾಳೆ ಉಡುಪಿಗೆ ತರಲಾಗುತ್ತಿದೆ.
ಉಡುಪಿಯ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಅವಕಾಶ ಕಲ್ಪಿಸಲಾಗಿದೆ.
ನಾಳೆ (ಸೆ.14) ಬೆಳಿಗ್ಗೆ 9 ಗಂಟೆಗೆ ಉಡುಪಿಯ ಶೋಕಮಾತೆ ಚರ್ಚ್ ಗೆ ಪಾರ್ಥಿವ ಶರೀರವನ್ನು ತಂದು ಅಲ್ಲಿ ಪ್ರಾರ್ಥನೆ ನೆರವೇರಿಸಿ ಬಳಿಕ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.
ಬಳಿಕ ಮಂಗಳೂರಿಗೆ ತೆಗೆದುಕೊಂಡು ಹೋಗಿ ನಂತರ ಸೆ.15 ರಂದು ಬೆಂಗಳೂರಿನ ಸೈಂಟ್ ಫ್ಯಾಟ್ರಿಕ್ ಚರ್ಚ್ನಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ. ಅಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರು ಭೇಟಿ ನೀಡಿ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.
