ಕ್ಯಾನಬೆರ್ರಾ: ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡ 13 ರನ್‌ಗಳ ಗೆಲುವು ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಹೇಳಿಕೊಳ್ಳುವಂತಹ ಆರಂಭಿಕ ಜತೆಯಾಟ ದೊರೆಯಲಿಲ್ಲ. ಆದರೆ, ಕೆಳ ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜ ಜೋಡಿ ಬಿರುಸಿನ ಬ್ಯಾಟಿಂಗ್ ಮೂಲಕ ತಂಡಕ್ಕೆ ನೆರವಾಯಿತು. ಪಾಂಡ್ಯ 76 ಎಸೆತಗಳಲ್ಲಿ 92 ರನ್ ಹಾಗೂ ಜಡೇಜ 50 ಎಸೆತಗಳಲ್ಲಿ 66 ರನ್ ಗಳಿಸಿದರು. ಕೊನೆಯ ನಾಲ್ಕು ಓವರ್‌ಗಳಲ್ಲಿ ಈ ಜೋಡಿ 59 ರನ್ ಪೇರಿಸಿತು. ಇದರಿಂದ ಟೀಂ ಇಂಡಿಯಾ ಆಸ್ಟ್ರೇಲಿಯಾಗೆ 303 ರನ್‌ಗಳ ಸವಾಲಿನ ಗುರಿ ನೀಡಿತು.
ಪಂದ್ಯದ ಕೊನೆಯ ಓವರ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ ಆ್ಯಡಮ್ ಜಂಪಾ ವಿಕೆಟ್ ಕಬಳಿಸುವ ಮೂಲಕ ತಂಡದ ಗೆಲುವಿಗೆ ನೆರವಾದರು. ಆಸ್ಟ್ರೇಲಿಯಾ 49.3 ಓವರ್‌ಗಳಲ್ಲಿ 289 ರನ್ ಗಳಿಸಿತು. ನಾಯಕ ಆ್ಯರನ್ ಫಿಂಚ್ 75 (82), ಗ್ಲೆನ್ ಮ್ಯಾಕ್ಸ್‌ವೆಲ್ 59 (38) ಭರ್ಜರಿ ಆಟ ಪ್ರದರ್ಶಿಸಿದರು.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ 2 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ತನ್ನದಾಗಿಸಿಕೊಂಡಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…