Featured

ಆಸ್ತಿಗಾಗಿ ಅಪ್ಪನ ಕೊಲೆ ಮಾಡಲು ಮೂರು ಲಕ್ಷ ಸುಪಾರಿ ಕೊಟ್ಟ ಮಗ – vishwanews24

ಆಸ್ತಿಗಾಗಿ ಅಪ್ಪನ ಕೊಲೆ ಮಾಡಲು ಮೂರು ಲಕ್ಷ ಸುಪಾರಿ ಕೊಟ್ಟ ಮಗ

ಬಾಗಲಕೋಟೆ: ಅಪ್ಪನ ಕೊಲೆ ಮಾಡಲು ಮಗನೇ ಮೂರು ಲಕ್ಷ ಸುಪಾರಿ ಕೊಟ್ಟ ಪ್ರಕರಣವೊಂದು ಬಾಗಲಕೋಟೆಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

ಚೆನ್ನಪ್ಪ (66) ಕೊಲೆಯಾದ ತಂದೆ. ವಿಕಲಚೇತನನಾಗಿರುವ ಮಗ ಚೆನ್ನಬಸಪ್ಪ ವಿಜಯಪುರ  ಜಿಲ್ಲೆ ನಿಡಗುಂದಿ ಮೂಲದ ಮಾಂತೇಶ್‍ಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆ.

ಆಸ್ತಿಗಾಗಿ ಕೊಲೆ: 32 ಎಕರೆ ಆಸ್ತಿ ಅದರಲ್ಲಿ ವಿಭಾಗ ಮಾಡುವ ವಿಚಾರಕ್ಕೆ ಪದೇ ಪದೇ ಕಲಹ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಅಪ್ಪನನ್ನು ಕೊಲೆ ಮಾಡಲು ಮಗ ಪ್ಲಾನ್ ಮಾಡಿದ್ದಾನೆ. ಅಂತೆಯೇ ಚೆನ್ನಬಸಪ್ಪ, ಸೊಸೆ ಶಿವಬಸವ್ವ ಹಾಗೂ ಮಗನ ಆಪ್ತ ರಮೇಶ್ ಮನಗೂಳಿ ಸೇರಿ ಕೊಲೆಗೆ ಪ್ಲಾನ್ ಮಾಡಿದ್ದಾರೆ. ಬಳಿಕ ಮಾಂತೇಶ್ ಮರಡಿಮಠ ಎಂಬಾತನಿಗೆ 3 ಲಕ್ಷ ಹಣ ನೀಡಿದ್ದಾರೆ. ಅಂತೆಯೇ ಚೆನ್ನಪ್ಪನನ್ನು ರಾಂಪುರ ಗ್ರಾಮದ ಬಳಿ ಮಚ್ಚಿನಿಂದ ಕೊಚ್ಚಿ ಕಲ್ಲಿನಿಂದ ತಲೆ ಜಜ್ಜಿ ಕೊಲೆ ಮಾಡಲಾಗಿದೆ.

ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗ ಚನ್ನಬಸಪ್ಪ, ಸೊಸೆ ಶಿವಬಸವ್ವ, ಸುಪಾರಿ ಪಡೆದು ಕೊಲೆ ಮಾಡಿದ ಮಾಂತೇಶ್‍ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

22 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

22 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago