Featured

ಆಸ್ತಿಗಾಗಿ ಪುಟ್ಟ ಬಾಲಕಿಯನ್ನು ಮೂರನೇ ಮಹಡಿಯಿಂದ ತಳ್ಳಿ ಕೊಲೆ ; ಮಲತಾಯಿ ಬಂಧನ – vishwanews24

ಆಸ್ತಿಗಾಗಿ ಪುಟ್ಟ ಬಾಲಕಿಯನ್ನು ಮೂರನೇ ಮಹಡಿಯಿಂದ ತಳ್ಳಿ ಕೊಲೆ ; ಮಲತಾಯಿ ಬಂಧನ

ಬೀದರ್: ಬಾಲಕಿಗೆ ಆಟ ಆಡಿಸುವ ನೆಪದಲ್ಲಿ ಟೆರಸ್‌ಗೆ ಕರೆದೊಯ್ದು ಮೂರನೇ ಮಹಡಿಯಿಂದ ಮಲತಾಯಿ ತಳ್ಳಿ ಕೊಲೆ ಮಾಡಿದ ಅಮಾನವೀಯ ಘಟನೆ ಬೀದರ್  ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ.

7 ವರ್ಷದ ಸಾನ್ವಿ ಮೃತ ಬಾಲಕಿ ಹಾಗೂ ಆರೋಪಿಯನ್ನು ರಾಧಾ ಎಂದು ಗುರುತಿಸಲಾಗಿದೆ. ಆ.27ರಂದು ಮಲತಾಯಿ ರಾಧಾ ಬಾಲಕಿಗೆ ಆಟ ಆಡಿಸುವ ನೆಪದಲ್ಲಿ 3ನೇ ಮಹಡಿಗೆ ಕರೆದೊಯ್ದಿದ್ದಳು. ಈ ವೇಳೆ ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು. ಆ ದಿನ ಎಲ್ಲರೂ ಸಾನ್ವಿ ಆಯತಪ್ಪಿ ಬಿದ್ದಳು ಎಂದು ನಂಬಿದ್ದರು. ಆ.28ರಂದು ಮೃತ ಬಾಲಕಿ ತಂದೆ ಸಿದ್ಧಾಂತ ಗಾಂಧಿಗಂಜ್ ಠಾಣೆಯಲ್ಲಿ ಆಕಸ್ಮಿಕ ಸಾವು ದೂರು ನೀಡಿದ್ದರು.

ಸೆ.12ರಂದು ಮೃತ ಬಾಲಕಿ ತಂದೆ ಸಿದ್ಧಾಂತಗೆ ಪಕ್ಕದ ಮನೆಯವರು ವಿಡಿಯೋವೊಂದನ್ನು ಕಳುಹಿಸಿದ್ದರು. ವಿಡಿಯೋದಲ್ಲಿ ಬಾಲಕಿ ಸಾವನ್ನಪ್ಪಿದ ದಿನ ಆಕೆಯ ಜೊತೆ ಮಲತಾಯಿ ರಾಧಾ ಅನುಮಾನಾಸ್ಪದವಾಗಿ ಓಡಾಡಿರುವುದು ಕಂಡುಬಂದಿದೆ. ಈ ಸಿಸಿಟಿವಿ ದೃಶ್ಯ ನೋಡಿದಾಗ ವಿಷಯ ಬಹಿರಂಗವಾಗಿದ್ದು, ವಿಡಿಯೋ ಆಧರಿಸಿ ಬಾಲಕಿಯ ಅಜ್ಜಿ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತ ಸಾನ್ವಿ ತಾಯಿ ಖಾಯಿಲೆಗೆ ತುತ್ತಾಗಿ 6 ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಬಳಿಕ 2023ರಲ್ಲಿ ರಾಧಾ ಜೊತೆ ಸಿದ್ಧಾಂತ ಎರಡನೇ ವಿವಾಹವಾಗಿದ್ದು, ಅವರಿಗೆ ಎರಡು ಅವಳಿ ಮಕ್ಕಳಿವೆ. ಹೀಗಾಗಿ ಸಿದ್ಧಾಂತನ ಮೊದಲ ಮಗುವನ್ನು ಎರಡನೇ ಪತ್ನಿ ರಾಧಾ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ರಾಧಾಳನ್ನು ಬಂಧಿಸಿದ್ದಾರೆ. ವಿಚಾರಣೆಗೊಳಪಡಿಸಿದಾಗ ಆಸ್ತಿ ಇಬ್ಭಾಗ ಆಗುತ್ತದೆ ಎಂದು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Vishwa News 24

Recent Posts

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

1 minute ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

8 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

21 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

33 minutes ago

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

46 minutes ago

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

1 hour ago