Featured

ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ಆಸ್ಪತ್ರೆಗಳಲ್ಲಿ ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಮಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಇಲ್ಲಿಯ ವರೆಗೂ ಸಾಮೂಹಿಕವಾಗಿ ಯಾವುದೇ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಶೇ.15ರಿಂದ 20 ರಷ್ಟು ಶುಲ್ಕ ಹೆಚ್ಚಳದ ಬಗ್ಗೆ ಚರ್ಚೆಗಳಿವೆ. ಈ ಹಿಂದೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮಾತ್ರ ಆರೋಗ್ಯ ಇಲಾಖೆಯ ಆಯುಕ್ತರ ಅನುಮತಿ ಪಡೆದು ಶುಲ್ಕ ಪರಿಷ್ಕರಣೆ ಮಾಡಲಾಗಿದೆ. ಉಳಿದ ಯಾವುದೇ ಆಸ್ಪತ್ರೆಗಳಲ್ಲಾಗಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಾಗಲಿ ಇಲ್ಲಿಯ ವರೆಗು ಸೇವಾ ಶುಲ್ಕದಲ್ಲಿ ಹೆಚ್ಚಳವಾಗಿಲ್ಲ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಗೆ ಹೊರೆಯಾಗದಂತೆ ಸೂಕ್ತ ರೀತಿಯಲ್ಲಿ ಶುಲ್ಕ ಪರಿಷ್ಕರಣೆ ಮಾಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಅರ್ಥವಿಲ್ಲ.ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಅಷ್ಟಕ್ಕೂ ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮೂರು, ನಾಲ್ಕು ವರ್ಷಗಳಿಗೊಮ್ಮೆ ಶುಲ್ಕ ಪರಿಷ್ಕರಣೆಯಾಗುವುದು ಸಹಜ ಪ್ರಕ್ರಿಯೆಯಾಗಿದೆ. ಇದನ್ನೇ ಮುಂದಿಟ್ಟುಕೊಂಡು ಗ್ಯಾರಂಟಿಗಳಿಗೆ ತಳುಕು ಹಾಕಿ ನೋಡುವುದು ಸರಿಯಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದ ಹಣವನ್ನು ಆಯಾ ಆಸ್ಪತ್ರೆಗಳ ARS ಸಮಿತಿಗಳು ಚರ್ಚೆ ನಡೆಸಿ ಆಸ್ಪತ್ರೆಯ ಅಭಿವೃದ್ಧಿಗೆ ಬಳಕೆ ಮಾಡುತ್ತವೆ. ಆಸ್ಪತ್ರೆಯ ARS Fund ಹೆಸರಲ್ಲಿ ಅನುದಾನ ಲಭ್ಯವಿರುತ್ತದೆ. ಆಸ್ಪತ್ರೆಯ ಸ್ವಚ್ಛತೆ, ದುರಸ್ಥಿ ಕಾರ್ಯಗಳು ಸೇರಿದಂತೆ ಆಸ್ಪತ್ರೆಗಳ ಅಭಿವೃದ್ಧಿಗಳಿಗೆ ಬಳಕೆ ಮಾಡಲಾಗುತ್ತದೆ. ಸರ್ಕಾರ ಕೇವಲ ಅನುಮತಿ ನೀಡುತ್ತದೆ ಅಷ್ಟೇ ಎಂದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago