Featured

ಆಹಾರವನ್ನು ಕಟ್ಟಲು ಪ್ಲಾಸ್ಟಿಕ್ ಬದಲು ಬಾಳೆ ಎಲೆ ಉಪಯೋಗಿಸಿ : ವೇದವ್ಯಾಸ್ ಕಾಮತ್ ಮನವಿ -Vishwanews24

ಮಂಗಳೂರು : ಆಹಾರ ಪೊಟ್ಟಣ ಕಟ್ಟಲು ಬಾಳೆ ಎಲೆ ಬಳಸಲು ಖ್ಯಾತ ಆಹಾರ ಡೆಲಿವರಿ ಸಂಸ್ಥೆಗಳಾದ ಸ್ವಿಗ್ಗಿ ಹಾಗೂ ಝೊಮೆಟೋ ಸಂಸ್ಥೆಗಳಿಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಮನವಿ ಮಾಡಿದ್ದಾರೆ.

ಪರಿಸರ ಸಂರಕ್ಷಣೆಗೆ ಟೊಂಕ ಕಟ್ಟಿರುವ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ನಗರದಲ್ಲಿರುವ ಪ್ಲಾಸ್ಟಿಕ್ ಹಾವಳಿಯನ್ನು ಕಡಿಮೆ ಮಾಡಲು ಆಹಾರ ಡೆಲಿವರಿ ಸಂಸ್ಥೆಗಳಾದ ಝೋಮೋಟೋ ಹಾಗೂ ಸ್ವಿಗ್ಗಿಗೆ ಈ ಬಗ್ಗೆ ಕಾರ್ಯಪ್ರವರ್ತರಾಗಲು ಲಿಖಿತ ಮನವಿ ಮಾಡಿದ್ದಾರೆ.

ಕರಾವಳಿಯ ಸಾಂಬಾರು ಪದಾರ್ಥಗಳನ್ನು ಬಿಟ್ಟು ಉಳಿದ ಆಹಾರವನ್ನು ಬಾಳೆ ಎಲೆಯಲ್ಲಿ ಪ್ಯಾಕ್ ಮಾಡಿ ಗ್ರಾಹಕರಿಗೆ ತಲುಪಿಸುವಂತಹ ಕಾರ್ಯಕ್ಕೆ ಮುಂದಾಗಬೇಕೆಂದು ಮಾಡಬೇಕೆಂದು ಮನವಿ ಮಾಡಿದ್ದಾರೆ.

 

ಕರಾವಳಿಯ ಖಾದ್ಯಗಳಾದ ಮೂಡೆ, ಕೊಟ್ಟಿಗೆ, ಗಟ್ಟಿ ಮುಂತಾದುವುಗಳನ್ನು ಬಾಳೆ ಎಲೆಯಲ್ಲಿ ಪ್ಯಾಕ್ ಮಾಡಿ ಕೊಟ್ಟರೆ ಆರೋಗ್ಯಕ್ಕೂ ಉತ್ತಮ ಎಂದು ಶಾಸಕರು ಮನವಿ ಮಾಡಿದ್ದಾರೆ.

ಶಾಸಕರ ಮನವಿಗೆ ಸ್ವಿಗ್ಗಿ ಸಂಸ್ಥೆ ಸಕರಾತ್ಮಕವಾಗಿ ಸ್ಪಂದಿಸಿದ್ದು ಈ ಬಗ್ಗೆ ಕಾರ್ಯಪ್ರವರ್ತರಾಗುತ್ತೇವೆ ಎಂದು ಭರವಸೆ ನೀಡಿದ್ದಾರೆ. ಪರಿಸರ ಸಂರಕ್ಷಣೆಗೆ ಶಾಸಕ ವೇದವ್ಯಾಸ್ ಕಾಮತ ಅವರ ಈ ದಿಟ್ಟ ಹೆಜ್ಜೆ ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago