ಬೆಂಗಳೂರು: ಕರಾವಳಿಯ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಆಗಸ್ಟ್ 11 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರವನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದೆ.
ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಜೂನ್ ತಿಂಗಳೊಳಗಾಗಿ ಈ ಮಾರ್ಗದಲ್ಲಿ ವಂದೇ ಭಾರತ್ ರೈಲು ಸೇವೆಯನ್ನು ಆರಂಭಿಸುವುದಾಗಿ ಈ ಹಿಂದೆ ತಿಳಿಸಿದ್ದರು. ಆದರೆ ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದ ಕ್ಲಿಷ್ಟಕರ ಘಾಟ್ ಪ್ರದೇಶದಲ್ಲಿ ಸಂಚರಿಸಲು ಅತ್ಯಗತ್ಯವಾದ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ (AEB) ವ್ಯವಸ್ಥೆ ಹೊಂದಿರುವ ರೇಕ್ ಲಭ್ಯವಿಲ್ಲದ ಕಾರಣ ಪ್ರಕ್ರಿಯೆ ತಡವಾಗಿತ್ತು.
ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF) ಯಿಂದ AEB ತಂತ್ರಜ್ಞಾನ ಹೊಂದಿರುವ 20 ಕೋಚ್‌ಗಳ ವಂದೇ ಭಾರತ್ ರೇಕ್ ಮೈಸೂರು ವಿಭಾಗಕ್ಕೆ ತಲುಪಿದೆ. ಪ್ರಸ್ತುತ ಈ ರೈಲನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ.
ಆಗಸ್ಟ್ 11ರಿಂದ ಆರಂಭವಾಗಲಿರುವ ಪ್ರಾಯೋಗಿಕ ಸಂಚಾರವು ಆಗಸ್ಟ್ 20ರವರೆಗೆ ನಡೆಯಲಿದೆ. ಭಾರತೀಯ ರೈಲ್ವೆಯ ಸಂಶೋಧನೆ, ವಿನ್ಯಾಸ ಮತ್ತು ಮಾನಕ ಸಂಸ್ಥೆಯ (RDSO) ತಂಡವು ಶೀಘ್ರದಲ್ಲೇ ಆಗಮಿಸಿ ಈ ಪರೀಕ್ಷಾರ್ಥ ಸಂಚಾರದ ಉಸ್ತುವಾರಿ ವಹಿಸಲಿದೆ ಎಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ತಿಳಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…