ಮಂಗಳೂರು: ಆ.16ರಿಂದ ಪಿಲಿಕುಳ ಮೃಗಾಲಯ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದ್ದು, ಮುಂಜಾನೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ತಿಳಿಸಿದ್ದಾರೆ.
ಪ್ರತೀ ಸೋಮವಾರ ಮೃಗಾಲಯದ ನಿರ್ವಹಣೆ ಕಾರ್ಯ ನಡೆಯಬೇಕಾಗಿರುವುದರಿಂದ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶವಿಲ್ಲ. ಇನ್ನು ಮೃಗಾಲಯಕ್ಕೆ ಬರುವ ಸಂದರ್ಭ ಕೊರೊನಾ ಬಗ್ಗೆ ಜಿಲ್ಲಾಡಳಿತ ನೀಡುತ್ತಿರುವ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಮೃಗಾಲಯಕ್ಕೆ ಬರುವ ವೇಳೆ ಸಂದರ್ಶಕರು ಮಾಸ್ಕ್ ಅನ್ನು ಕಡ್ಡಾಯವಾಗಿ ಸರಿಯಾಗಿ ಧರಿಸಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್ ಪರೀಕ್ಷೆ ಮಾಡಲಾಗುವುದು. ಅಲ್ಲದೇ, ಕೈಗಳನ್ನು ಸ್ಯಾನಿಟೈಸ್ ಮಾಡಲಾಗುವುದು. ಮೃಗಾಲಯದ ಒಳಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಮೃಗಾಲಯದಲ್ಲಿ 76 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋರಿದ್ದಾರೆ.
ಪ್ರವೇಶ ದ್ವಾರದ ಬೋಕ್ಸ್ ಆಫೀಸ್ನಲ್ಲೇ ಟಿಕೇಟ್ ಅನ್ನು ನೀಡಲಾಗುವುದು. ಮೃಗಾಲಯದ ಎದುರುಗಡೆ ನಿಗದಿಪಡಿಸಿದ ಪ್ರದೇಶದಲ್ಲಿ ವಾಹನಗಳನ್ನು ನಿಲುಗಡೆ ಮಾಡಲು ಅನುಮತಿ ನೀಡಲಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಹೆಚ್.ಜೆ.ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೊನಾ ಸೋಂಕು- ಮಳೆಗಾಲದ ಹಿನ್ನೆಲೆ ಪಿಲಿಕುಳ ನಿಸರ್ಗಧಾಮ ಬಂದ್ ಮಾಡಲಾಗಿತ್ತು. ಇದೀಗ ಜಿಲ್ಲಾಡಳಿತ ಕೊರೊನಾ ಬಗ್ಗೆ ನೀಡುತ್ತಿರುವ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಮೃಗಾಲಯ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…