ಆ.16ರಿಂದ ಪಿಲಿಕುಳ ಮೃಗಾಲಯ ಸಾರ್ವಜನಿಕರ ವೀಕ್ಷಣೆಗೆ ಅವಕಾಶ -Vishwanews24

ಮಂಗಳೂರು: ಆ.16ರಿಂದ ಪಿಲಿಕುಳ ಮೃಗಾಲಯ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದ್ದು, ಮುಂಜಾನೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ತಿಳಿಸಿದ್ದಾರೆ.

ಪ್ರತೀ ಸೋಮವಾರ ಮೃಗಾಲಯದ ನಿರ್ವಹಣೆ ಕಾರ್ಯ ನಡೆಯಬೇಕಾಗಿರುವುದರಿಂದ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶವಿಲ್ಲ. ಇನ್ನು ಮೃಗಾಲಯಕ್ಕೆ ಬರುವ ಸಂದರ್ಭ ಕೊರೊನಾ ಬಗ್ಗೆ ಜಿಲ್ಲಾಡಳಿತ ನೀಡುತ್ತಿರುವ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಮೃಗಾಲಯಕ್ಕೆ ಬರುವ ವೇಳೆ ಸಂದರ್ಶಕರು ಮಾಸ್ಕ್‌ ಅನ್ನು ಕಡ್ಡಾಯವಾಗಿ ಸರಿಯಾಗಿ ಧರಿಸಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್‌ ಸ್ಕ್ಯಾನಿಂಗ್‌‌‌‌‌‌‌‌ ಪರೀಕ್ಷೆ ಮಾಡಲಾಗುವುದು. ಅಲ್ಲದೇ, ಕೈಗಳನ್ನು ಸ್ಯಾನಿಟೈಸ್‌ ಮಾಡಲಾಗುವುದು. ಮೃಗಾಲಯದ ಒಳಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಮೃಗಾಲಯದಲ್ಲಿ 76 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋರಿದ್ದಾರೆ.

ಪ್ರವೇಶ ದ್ವಾರದ ಬೋಕ್ಸ್‌‌‌ ಆಫೀಸ್‌‌ನಲ್ಲೇ ಟಿಕೇಟ್‌‌ ಅನ್ನು ನೀಡಲಾಗುವುದು. ಮೃಗಾಲಯದ ಎದುರುಗಡೆ ನಿಗದಿಪಡಿಸಿದ ಪ್ರದೇಶದಲ್ಲಿ ವಾಹನಗಳನ್ನು ನಿಲುಗಡೆ ಮಾಡಲು ಅನುಮತಿ ನೀಡಲಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಹೆಚ್‌‌‌.ಜೆ.ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊರೊನಾ ಸೋಂಕು- ಮಳೆಗಾಲದ ಹಿನ್ನೆಲೆ ಪಿಲಿಕುಳ ನಿಸರ್ಗಧಾಮ ಬಂದ್‌ ಮಾಡಲಾಗಿತ್ತು. ಇದೀಗ ಜಿಲ್ಲಾಡಳಿತ ಕೊರೊನಾ ಬಗ್ಗೆ ನೀಡುತ್ತಿರುವ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಮೃಗಾಲಯ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago