Featured

ಆ. 25 ರಂದು ಪಡುಬಿದ್ರಿ ಬಂಟರ ಸಂಘದಲ್ಲಿ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ – vishwanews24

ಆ. 25 ರಂದು ಪಡುಬಿದ್ರಿ ಬಂಟರ ಸಂಘದಲ್ಲಿ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ

ಪಡುಬಿದ್ರಿ ಬಂಟರ ಸಂಘ, ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್, ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಜಂಟಿ ಸಹಯೋಗದ ಕಾರ್ಯಕ್ರಮ

ಪಡುಬಿದ್ರಿ : ಪಡುಬಿದ್ರಿ ಬಂಟರ ಸಂಘ ಮತ್ತು ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್, ಉಡುಪಿ ಗ್ರಾಮೀಣ ಬಂಟರ ಸಂಘ ದ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಆ, 25 ರಂದು ಪಡುಬಿದ್ರಿ ಬಂಟರ ಸಂಘದ ಆಶಾ ಪ್ರಕಾಶ್ ಶೆಟ್ಟಿ ಸಭಾಭವನದಲ್ಲಿ ಯುವಕರಿಗೆ ಮತ್ತು ಮಹಿಳೆಯರಿಗೆ ಒಂದು ದಿನದ ” ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮ” ನಡೆಯಲಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದರು.

ಪಡುಬಿದ್ರಿ ಬಂಟರ ಸಂಘದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯುವಕರಿಗೆ ಮತ್ತು ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿ ಮುಕ್ತವಾಗಿ ನಡೆಯಲಿರುವ ಕಾರ್ಯಕ್ರಮವನ್ನು ಎಂ. ಆರ್. ಜಿ. ಗ್ರೂಪ್ ನ ಛೇರ್ಮನ್ ಡಾ| ಕೆ. ಪ್ರಕಾಶ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು.

ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ, ಪಡುಬಿದ್ರಿ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಶಶಿಧರ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ರವೀಂದ್ರನಾಥ್ ಜಿ‌ ಹೆಗ್ಡೆ, ಸುರೇಶ ಶೆಟ್ಟಿ, ಸಾಂತೂರ್ ಭಾಸ್ಕರ್ ಶೆಟ್ಟಿ, ನವೀನ್ ಚಂದ್ರ ಜೆ. ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ, ಉದ್ಘಾಟನಾ ಸಮಾರಂಭದ ಬಳಿಕ ಉದ್ಯಮಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಭಾಗವಹಿಸುವ ಅಭ್ಯರ್ಥಿಗಳಿಗೆ ಪ್ರೇರಣಾತ್ಮಕ ಮಾತುಗಳೊಂದಿಗೆ ತನ್ನ ಕಷ್ಟದ ದಿನಗಳು, ತನ್ನ ಉದ್ದಿಮೆ ಮಾಡುವ ಸಂದರ್ಭದಲ್ಲಿ ಬಂದಿರುವ ವಿವಿಧ ಸವಾಲುಗಳು, ಅವುಗಳನ್ನು ಎದುರಿಸಿ ಮುಂದೆ ಯಶಸ್ವಿಯಾಗಿ ಸಾಗಿ ಈಗ ಯಶಸ್ವಿ ಉದ್ಯಮಿಯಾಗಿ ಸಾಗಿ ಬಂದ ರೀತಿಯ ಬಗ್ಗೆ ವಿವರಿಸಿ ಸ್ವ – ಉದ್ಯೋಗ ಮಾಡಲು ಪ್ರೇರಣೆ ಕೊಡಲಿದ್ದಾರೆ.

ಪ್ರೊ| ದಿವ್ಯಾರಾಣಿ ಪ್ರದೀಪ್, ಮಹಿಳಾ ಸಬಲೀಕರಣ ಮತ್ತು ಮಹಿಳೆರು ಯಾವ ತರಹದ ಉದ್ಯಮದ ಮೂಲಕ ಬೆಳೆಯ ಬಹುದು, ಮಹಿಳಾ ಯುವ ಉದ್ಯಮಿ ಮೈತ್ರಿ ಮಲ್ಲಿ ಮಂಗಳೂರು, ಯಶಸ್ವಿ ಉದ್ಯಮಿಯಾಗಲು ಪ್ರಯತ್ನ ಪಡುವ ಬಗ್ಗೆ ಮಾಹಿತಿ ನೀಡಲಿದ್ದಾರೆ. ಡಾ. ಸಿ. ಕೆ.ಮಂಜುನಾಥ್, ಡಾ. ಶುಭ ಮಾಹೆ, ಪ್ರವೀಣ್ ಶೆಟ್ಟಿ ಎಂ. ಐ. ಟಿ, ಡಾ. ಸುಧೀರಾಜ್, ಲೀಡ್ ಬ್ಯಾಂಕ್ ಡಿವಿಷನಲ್ ಮ್ಯಾನೇಜರ್ ಹರೀಶ್ ಕುಮಾರ್ ಅವರು ನಾಯಕತ್ವ, ಸಂವಹನ‌ ಕಲೆ, ಇಂಟರ್ ವ್ಯೂ ಸಂದರ್ಶನಕ್ಕೆ ತಯಾರಿ, ಬ್ಯಾಂಕ್ ಗಳಿಂದ ಉದ್ಯಮಕ್ಕೆ ಸಿಗುವ ಸಹಾಯ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ಭಾಗವಹಿಸಿದ ಅಭ್ಯರ್ಥಿ ಗಳಿಗೆ ಸ್ಕಿಲ್ ಡೆವಲಪ್ಟೆಂಟ್ ಸೆಂಟರ್ ವತಿಯಿಂದ ಸರ್ಟಿಫಿಕೇಟ್ ನೀಡಲಾಗುವುದು ಎಂದರು.

ಪಡುಬಿದ್ರಿ ಬಂಟರ ಸಂಘದ ಸಿರಿಮುಡಿ ದತ್ತಿನಿಧಿ ಸ್ಥಾಪಕಾಧ್ಯಕ್ಷ ಭಾಸ್ಕರ್ ಶೆಟ್ಟಿ ಸಾಂತೂರು, ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಯುವ ಬಂಟರ ಸಂಘದ ಅಧ್ಯಕ್ಷ ನವೀನ್‌ ಶೆಟ್ಟಿ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಜ್ಯೋತಿ ಶೆಟ್ಟಿ, ಕಾರ್ಯಕ್ರಮ ಸಂಯೋಜಕಿ ಸಂತೃಪ್ತಿ ಎಂ. ಶೆಟ್ಟಿ, ಉಡುಪಿ ಗ್ರಾಮೀಣ ಬಂಟರ ಸಂಘದ ಕಾರ್ಯದರ್ಶಿ ವಿಜೀತ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

6 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

6 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

7 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

9 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

10 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

10 hours ago