ಬೆಂಗಳೂರು: ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಿ ಜಗತ್ತಿಗೆ ಸಾಧ್ಯವಾಗದ ಸಾಧನೆಯನ್ನು ಇದೀಗ ಇಸ್ರೋ (ISRO) ಮಾಡಿ ತೋರಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಇಸ್ರೋ ಕೇಂದ್ರ ಕಚೇರಿಗೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ.
ಬ್ರಿಕ್ಸ್ ಶೃಂಗಸಭೆ ಹಿನ್ನೆಲೆ ನರೇಂದ್ರ ಮೋದಿ ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಪ್ರವಾಸದಲ್ಲಿದ್ದಾರೆ. ಸಭೆಯ ನಡುವೆಯೂ ಮೋದಿ ಚಂದ್ರಯಾನ ಲ್ಯಾಂಡಿಂಗ್ ಪ್ರಕ್ರಿಯೆಯನ್ನು ಲೈವ್ ಆಗಿ ವೀಕ್ಷಿಸಿದ್ದರು. ಯಶಸ್ವಿ ಲ್ಯಾಂಡಿಂಗ್ ಬಳಿಕ ವಿಜ್ಞಾನಿಗಳನ್ನು ಅಭಿನಂದಿಸಿದ್ದರು.
ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಬಳಿಕ ಇಸ್ರೋ ಅಧ್ಯಕ್ಷ ಸೋಮನಾಥ್ ಜೊತೆ ಮೋದಿ ದೂರವಾಣಿ ಮೂಲಕ ವೈಯಕ್ತಿಕವಾಗಿ ಮಾತುಕತೆ ನಡೆಸಿದ್ದರು. ಆದರೂ ಮೋದಿ ಇದೀಗ ಬೆಂಗಳೂರಿಗೆ ಬರಲಿದ್ದು, ಇಸ್ರೋ ಕಚೇರಿಗೆ ತೆರಳಿ ಅಭಿನಂದನೆ ಸಲ್ಲಿಸಲು ನಿರ್ಧರಿಸಿದ್ದಾರೆ. ಅತ್ಯುನ್ನತ ಸಾಧನೆ ಮಾಡಿದ ವಿಜ್ಞಾನಿಗಳಿಗೆ ಗೌರವ ನೀಡಲಿದ್ದಾರೆ.
ಬುಧವಾರ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗುತ್ತಿದ್ದಂತೆಯೇ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಪ್ರಧಾನಿ ಮೋದಿ ಸಂಭ್ರಮ ಹಂಚಿಕೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ನಾನು ದಕ್ಷಿಣ ಆಫ್ರಿಕಾದಲ್ಲಿದ್ದೇನೆ. ಆದರೆ ನನ್ನ ಮನಸ್ಸು ಚಂದ್ರಯಾನ ಮೇಲಿತ್ತು. ಚಂದ್ರಯಾನ ಯಶಸ್ವಿ ಜನರಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ನಾನು ನಮ್ಮ ಜನರ ಖುಷಿಯ ಸಮಯದಲ್ಲಿ ಭಾಗಿಯಾಗಿದ್ದೇನೆ. ನಾನು ಇಸ್ರೋ ಮತ್ತು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…