ಬೆಂಗಳೂರು: ಆಗಸ್ಟ್ 3 ಕ್ಕೆ ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ 75 ಅಮೃತ ಮಹೋತ್ಸವಕ್ಕೆ ಅಂತಿಮ ಕ್ಷಣದ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಹರಿಹರ ಮತ್ತು ದಾವಣಗೆರೆ ಬೈಪಾಸ್ ನಡುವೆ ಇರುವ ಶ್ಯಾಮನೂರು ಪ್ಯಾಲೇಸ್ ಮೈದಾನದಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಸಿದ್ದರಾಮಯ್ಯ ಅವರು ಮಂಗಳವಾರ ಮಧ್ಯಾಹ್ಮ 2.30 ಕ್ಕೆ ಹುಬ್ಬಳ್ಳಿಗೆ ತೆರಳಲಿದ್ದಾರೆ. ಮಧ್ಯಾಹ್ಮ 3.30 ಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅವರನ್ನು ಸಿದ್ದರಾಮಯ್ಯ ಸ್ವಾಗತಿಸಲಿದ್ದಾರೆ. ಬಳಿಕ ಹುಬ್ಬಳ್ಳಿಯಲ್ಲಿ ಕೆಪಿಸಿಸಿ ರಾಜಕೀಯ ಸಲಹಾ ಸಮಿತಿ ಸಭೆ ನಡೆಯಲಿದ್ದು, ಅದರಲ್ಲಿ ರಾಜ್ಯ ಕಾಂಗ್ರೆಸ್ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.
ಸಿದ್ದರಾಮಯ್ಯ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವ ಕಾರ್ಯಕ್ರಮ ಬುಧವಾರ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಮುಖ್ಯ ಅಥಿತಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು ಐದು ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ.
ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯ ಕಾರ್ಯಕ್ರಮಗಳು ಹಾಗೂ ಜನಪರ ಯೋಜನೆಗಳ ಕುರಿತಾಗಿ ಅನಾವರಣ ಮಾಡಲಿದ್ದಾರೆ.
ಸಿದ್ದರಾಮೋತ್ವವ ಕಾರ್ಯಕ್ರಮದಲ್ಲಿ ಸುಮಾರು ಐದು ಲಕ್ಷ ಜನರು ಸೇರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಒಟ್ಟು ಒಂಬತ್ತು ವಿಭಾಗಗಳಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಪಾರ್ಕಿಂಗ್, ಸಂಚಾರ ನಿಯಂತ್ರಣ, ರಸ್ತೆ ಬಂದೋಬಸ್ತ್, ವಾಹನಗಳ ಡೈವರ್ಷನ್ ಸಂಚಾರ ನಿಯಂತ್ರಣ, ರಸ್ತೆ ಬಂದೋಬಸ್ತ್ ಕಾರ್ಯಕ್ರಮದ ವೇದಿಕೆ ಬಂದೋಬಸ್ತ್ , ಸಾರ್ವಜನಿಕರು ಕುಳಿತುಕೊಳ್ಳುವ ಸ್ಥಳ, ಕಾರ್ಯಕ್ರಮದ ಸ್ಥಳದ ಬಂದೋಬಸ್ತ್, ಊಟದ ಸ್ಥಳದ ಬಂದೋಬಸ್ತ್ ಹಾಗೂ ದಾವಣಗೆರೆ ನಗರದ ಒಳಭಾಗದಲ್ಲಿ ಸುಗಮ ಸಂಚಾರ ಬಂದೋಬಸ್ತ್ ಮತ್ತು ಇತರೆ ಬಂದೋಬಸ್ತ್ ಎಂದು ವಿಭಾಗಿಸಲಾಗಿದೆ.
ಭದ್ರತೆಯಾಗಿ 16 ಡಿವೈಎಸ್‌ಪಿ, ಸಿಪಿಐ 118, ಪಿಎಸ್‌ಐ 360 , ಎಎಸ್‌ಐ 354, ಪೊಲೀಸ್ ಪೇದೆ 2796 ಸೇರಿದಂತೆ ಕೆಎಸ್‌ಆರ್‌ಪಿ, ಡಿಎಆರ್ ಪೊಲೀಸ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಡ್ರೋಣ್ ಕ್ಯಾಮರಾಗಳ ಮೂಲಕವೂ ಹದ್ದಿನ ಕಣ್ಣಿಡಲಾಗುತ್ತದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…