ಹುಬ್ಬಳ್ಳಿ : “1-8ನೇ ತರಗತಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಆ. 30ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಟಾಸ್ಕ್ ಫೋಸ್ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆಗಸ್ಟ್ 23ರಿಂದ 9ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದ್ದು, ಅದರ ಸಾಧಕ-ಬಾಧಕಗಳನ್ನು ಗಮನಿಸಿ 1-8ನೇ ತರಗತಿಗಳನ್ನು ಆರಂಭಿಸುವ ಕುರಿತು ಚಿಂತನೆ ನಡೆಸಲಾಗುವುದು” ಎಂದಿದ್ದಾರೆ.
“6 ರಿಂದ 8ನೇ ತರಗತಿ ಪ್ರಾರಂಭ ಮಾಡಬಹುದು ಎಂದು ಉನ್ನತ ಮಟ್ಟದ ತಜ್ಞರ ಸಮಿತಿಯ ಡಾ.ದೇವಿಪ್ರಸಾದ ಶೆಟ್ಟಿ ಅವರು ಸಲಹೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಆರಂಭವಾದ ಶಾಲೆಗಳ ಕುರಿತು ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರಿಂದ ಉತ್ತಮ ಉತ್ಸಾಹ ಕಂಡುಬಂದಿದ್ದು, ಈ ಕಾರಣದಿಂದ ಶಾಲೆಗಳನ್ನು ಆರಂಭಿಸಬಹುದು ಎನ್ನುವ ಆಲೋಚನೆ ವ್ಯಕ್ತವಾಗುತ್ತಿದೆ. ಆದರೆ, ತಾಂತ್ರಿಕ ಸಮಿತಿಯ ವರದಿಯ ಮೇಲೆ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
“ಒಂದು ವರ್ಷದಿಂದ ಶಿಕ್ಷಣದಿಂದ ವಂಚಿತರಾದ ಮಕ್ಕಳಿಗೆ ಮತ್ತೆ ಶಿಕ್ಷಣ ನೀಡುವ ನಿಟ್ಟಿನಲ್ಲಿ 1-8ನೇ ತರಗತಿ ಪ್ರಾರಂಭಿಸಲು ಶಿಕ್ಷಣ ಇಲಾಖೆ ಉತ್ಸುಕವಾಗಿದೆ. ಮಕ್ಕಳ ಮೇಲೆ ಕೊರೊನಾ ಮೂರನೇ ಅಲೆಯು ಪರಿಣಾಮ ಬೀರುವುದಿಲ್ಲ ಎಂದು ಮಕ್ಕಳ ತಜ್ಞರು ಹಾಗೂ ಶಿಕ್ಷಣ ತಜ್ಞರು ಸೇರಿದಂತೆ ಎಲ್ಲರೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಆಧಾರದ ಮೇರೆಗೆ ಕೊರೊನಾ ನಿಯಮಾವಳಿಗಳನ್ನು ಅನುಸರಿಸಿ ಶಾಲೆಗಳನ್ನು ಆರಂಭಿಸಲಾಗುವುದು. ಒಂದುವೇಳೆ, ಕೊರೊನಾದ ಮೂರನೇ ಅಲೆ ವ್ಯಾಪಿಸಿದ್ದಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…