ಮಂಗಳೂರು: ಆಗಸ್ಟ್ 5ರಂದು ಹಲವು ವರ್ಷಗಳ ಕನಸಾಗಿರುವ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಕಾರ್ಯ ನಡೆಯಲಿದೆ. ಆ ದಿನದಂದು ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುವ ಸಂದರ್ಭದಲ್ಲಿ ನಗರದಲ್ಲಿ ಹಿಂದೂ ಪರ ಸಂಘಟನೆಗಳು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಬಗ್ಗೆ ಇಲಾಖೆಗೆ ಮಾಹಿತಿ ಲಭಿಸಿದೆ. ಇದೇ ವೇಳೆ ಕೆಲವರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಬಗ್ಗೆಯೂ ವಿಚಾರ ಪೊಲೀಸ್ ಇಲಾಖೆಗೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಕ್ಷನ್ 144ರಡಿಯಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ.
ಆಗಸ್ಟ್ 4ರ ರಾತ್ರಿ 8 ಗಂಟೆಯಿಂದ ಆಗಸ್ಟ್ 6ರ ಬೆಳಿಗ್ಗೆ 6 ಗಂಟೆಯ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…