Featured

ಆ.9ರಂದು ಉಡುಪಿ ಕೃಷ್ಣಮಠದ ನೂತನ ‘ಯಾಳಿ’ ಲೋಕಾರ್ಪಣೆ – vishwanews24

ಆ.9ರಂದು ಉಡುಪಿ ಕೃಷ್ಣಮಠದ ನೂತನ ‘ಯಾಳಿ’ ಲೋಕಾರ್ಪಣೆ

ಉಡುಪಿ: ಸುಮಾರು ಎಂಟು ಶತಮಾನಗಳಿಂದ ದ್ವೈತ ತತ್ವದ ಬೆಳಕನ್ನು ವಿಶ್ವಕ್ಕೆ ನೀಡಿದ ಆಚಾರ್ಯ ಮಧ್ವಕರಾರ್ಚಿತ ಉಡುಪಿ ಶ್ರೀಕೃಷ್ಣನ ಉಡುಪಿಯ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ದರ್ಶಿಸುವ ಅವಕಾಶವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕಲ್ಪಿಸಿದ್ದು, ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತುಪೌಳಿ)ಯನ್ನು ಸುಮಾರು ಒಂದು‌ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಕನಕ ಗೋಪುರಕ್ಕೆ ಹೊಂದಿಕೊಂಡಿರುವ ಚಂದ್ರಶಾಲೆ ಸಹಿತ ಮಧ್ವ ಸರೋವರದ ವರೆಗೆ ಶ್ರೀಕೃಷ್ಣ ಆಲಯದ ಮೇಲ್ಛಾವಣಿಗೆ ಪ್ರಾಚೀನ ವಾಸ್ತುಶೈಲಿಯ ರೂಪ ನೀಡಲಾಗಿದೆ. ಆ ಮೂಲಕ ಕೃಷ್ಣಮಠದ ದಿವ್ಯ ಸೌಂದರ್ಯವನ್ನು ಭವ್ಯಗೊಳಿಸಲಾಗಿದೆ.

ನೂತನ ಯಾಳಿಯನ್ನು ಹೊಸ್ತಿಲ ಹುಣ್ಣಿಮೆಯ ಪರ್ವದಿನದಂದು ಆ.9ರಂದು ಬೆಳಿಗ್ಗೆ ಮಹಾಪೂಜೆಯ ಬಳಿಕ 10 ಗಂಟೆಗೆ ರಾಜ್ಯಸಭಾ ಸದಸ್ಯೆ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸುವರು. ಬಳಿಕ ರಾಜಾಂಗಣದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವರು.

ಇನ್ಫೋಸಿಸ್ ಫೌಂಡೇಶನ್ ಪ್ರವರ್ತಕರಾದ ಶ್ರೀಮತಿ ಸುಧಾ ಮೂರ್ತಿ ಮತ್ತು ನಿವೃತ್ತ ಮುಖ್ಯ ನ್ಯಾಯಾಧೀಶ ದಿನೇಶ್ ಕುಮಾರ್ ರವರು ಅಭ್ಯಾಗತರಾಗಿ ಆಗಮಿಸುವರು.

ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸುವರು ಎಂದು ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ ಹಾಗೂ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ.

ಮಹಿಳಾ ವಿದ್ಯಾಪೀಠದ ಶುಭಾರಂಭ:
ಮಹಿಳೆಯರಲ್ಲೂ ಧಾರ್ಮಿಕ, ಸಾಂಸ್ಕೃತಿಕ ಪ್ರಜ್ಞೆ ಉದ್ದೀಪನಗೊಳಿಸಿ ಅವರನ್ನೂ ತೊಡಗಿಸಿಕೊಳ್ಳುವ ಆಶಯದಿಂದ ಪುತ್ತಿಗೆ ಮಠದಿಂದ ಆರಂಭಿಸಲಾಗುವ ಮಹಿಳಾ ವಿದ್ಯಾಪೀಠಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸುಧಾ ಮೂರ್ತಿ ಇದೇ ಸಂದರ್ಭದಲ್ಲಿ ಗೀತಾ ಮಂದಿರದಲ್ಲಿ ಚಾಲನೆ ನೀಡುವರು.

ಬಿಡುವಿನ ವೇಳೆಯಲ್ಲಿ ‌ಮಹಿಳೆಯರಿಗೆ ಲಕ್ಷ್ಮೀಶೋಭಾನೆ, ಭಗವದ್ಗೀತೆ, ವಿವಿಧ ಶ್ಲೋಕಗಳನ್ನು ಮಾತ್ರವಲ್ಲದೇ ರಂಗೋಲಿ, ಹೂಕಟ್ಟುವುದು, ಬತ್ತಿ ಹೊಸೆಯುವುದು ಇತ್ಯಾದಿ ಧಾರ್ಮಿಕ ಚಟುವಟಿಕೆಗಳನ್ನು ಮಹಿಳಾ ವಿದ್ಯಾಪೀಠದಲ್ಲಿ ಅನುಭವಿ‌ ಮಹಿಳೆಯರು ತಿಳಿಸಿಕೊಡುವರು ಎಂದು ಪರ್ಯಾಯ ಪುತ್ತಿಗೆ ಮಠದ ಪ್ರಕಟನೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago