ಉಡುಪಿ: ಸುಮಾರು ಎಂಟು ಶತಮಾನಗಳಿಂದ ದ್ವೈತ ತತ್ವದ ಬೆಳಕನ್ನು ವಿಶ್ವಕ್ಕೆ ನೀಡಿದ ಆಚಾರ್ಯ ಮಧ್ವಕರಾರ್ಚಿತ ಉಡುಪಿ ಶ್ರೀಕೃಷ್ಣನ ಉಡುಪಿಯ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ದರ್ಶಿಸುವ ಅವಕಾಶವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕಲ್ಪಿಸಿದ್ದು, ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತುಪೌಳಿ)ಯನ್ನು ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಕನಕ ಗೋಪುರಕ್ಕೆ ಹೊಂದಿಕೊಂಡಿರುವ ಚಂದ್ರಶಾಲೆ ಸಹಿತ ಮಧ್ವ ಸರೋವರದ ವರೆಗೆ ಶ್ರೀಕೃಷ್ಣ ಆಲಯದ ಮೇಲ್ಛಾವಣಿಗೆ ಪ್ರಾಚೀನ ವಾಸ್ತುಶೈಲಿಯ ರೂಪ ನೀಡಲಾಗಿದೆ. ಆ ಮೂಲಕ ಕೃಷ್ಣಮಠದ ದಿವ್ಯ ಸೌಂದರ್ಯವನ್ನು ಭವ್ಯಗೊಳಿಸಲಾಗಿದೆ.
ನೂತನ ಯಾಳಿಯನ್ನು ಹೊಸ್ತಿಲ ಹುಣ್ಣಿಮೆಯ ಪರ್ವದಿನದಂದು ಆ.9ರಂದು ಬೆಳಿಗ್ಗೆ ಮಹಾಪೂಜೆಯ ಬಳಿಕ 10 ಗಂಟೆಗೆ ರಾಜ್ಯಸಭಾ ಸದಸ್ಯೆ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸುವರು. ಬಳಿಕ ರಾಜಾಂಗಣದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವರು.
ಇನ್ಫೋಸಿಸ್ ಫೌಂಡೇಶನ್ ಪ್ರವರ್ತಕರಾದ ಶ್ರೀಮತಿ ಸುಧಾ ಮೂರ್ತಿ ಮತ್ತು ನಿವೃತ್ತ ಮುಖ್ಯ ನ್ಯಾಯಾಧೀಶ ದಿನೇಶ್ ಕುಮಾರ್ ರವರು ಅಭ್ಯಾಗತರಾಗಿ ಆಗಮಿಸುವರು.
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸುವರು ಎಂದು ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ ಹಾಗೂ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ.
ಮಹಿಳಾ ವಿದ್ಯಾಪೀಠದ ಶುಭಾರಂಭ:
ಮಹಿಳೆಯರಲ್ಲೂ ಧಾರ್ಮಿಕ, ಸಾಂಸ್ಕೃತಿಕ ಪ್ರಜ್ಞೆ ಉದ್ದೀಪನಗೊಳಿಸಿ ಅವರನ್ನೂ ತೊಡಗಿಸಿಕೊಳ್ಳುವ ಆಶಯದಿಂದ ಪುತ್ತಿಗೆ ಮಠದಿಂದ ಆರಂಭಿಸಲಾಗುವ ಮಹಿಳಾ ವಿದ್ಯಾಪೀಠಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸುಧಾ ಮೂರ್ತಿ ಇದೇ ಸಂದರ್ಭದಲ್ಲಿ ಗೀತಾ ಮಂದಿರದಲ್ಲಿ ಚಾಲನೆ ನೀಡುವರು.
ಬಿಡುವಿನ ವೇಳೆಯಲ್ಲಿ ಮಹಿಳೆಯರಿಗೆ ಲಕ್ಷ್ಮೀಶೋಭಾನೆ, ಭಗವದ್ಗೀತೆ, ವಿವಿಧ ಶ್ಲೋಕಗಳನ್ನು ಮಾತ್ರವಲ್ಲದೇ ರಂಗೋಲಿ, ಹೂಕಟ್ಟುವುದು, ಬತ್ತಿ ಹೊಸೆಯುವುದು ಇತ್ಯಾದಿ ಧಾರ್ಮಿಕ ಚಟುವಟಿಕೆಗಳನ್ನು ಮಹಿಳಾ ವಿದ್ಯಾಪೀಠದಲ್ಲಿ ಅನುಭವಿ ಮಹಿಳೆಯರು ತಿಳಿಸಿಕೊಡುವರು ಎಂದು ಪರ್ಯಾಯ ಪುತ್ತಿಗೆ ಮಠದ ಪ್ರಕಟನೆ ತಿಳಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…