ಬೆಂಗಳೂರು: ಇಂಗ್ಲೆಂಡ್-ವೇಲ್ಸ್ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಆಟಗಾರರು ನೀಲಿ ಜೆರ್ಸಿಯ ಬದಲಾಗಿ ಕೇಸರಿ ಬಣ್ಣದ ಉಡುಪು ಧರಿಸಿ ಕಣಕ್ಕಿಳಿಯಲಿದ್ದಾ ರೆ.
ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ICC) ನಿಯಮದ ಅನುಸಾರ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸುವ ಪ್ರತಿಯೊಂದು ತಂಡಕ್ಕೆ ಎರಡು ಬಣ್ಣಗಳ ಜೆರ್ಸಿಯನ್ನು ಬಳಸಿಕೊಳ್ಳಬಹುದಾಗಿದೆ.
ಸಾಮಾನ್ಯವಾಗಿ ಫುಟ್ಬಾಲ್ ಪಂದ್ಯಗಳ ವೇಳೆ ಕಂಡು ಬರುವ ಹೋಂ ಅಂಡ್ ಅವೇ ಮಾದರಿಯಲ್ಲಿ ಈ ನಿಯಮವಿದ್ದು, ಇಲ್ಲಿ ಆತಿಥೇಯ ದೇಶವನ್ನು ಹೊರತುಪಡಿಸಿ ಇತರ ತಂಡಗಳಿಗೆ ಜೆರ್ಸಿಯ ಆಯ್ಕೆ ಇರಲಿದೆ.
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತನ್ನ ಜೆರ್ಸಿ ಬಣ್ಣವನ್ನು ಬದಲಾಯಿಸಿ ಆರೆಂಜ್ ಉಡುಪು ಧರಿಸಿ ಆಡಲಿದೆ. ಟೀಂ ಇಂಡಿಯಾ ಜೂನ್ 30 ರಂದು ಇಂಗ್ಲೆಂಡ್ ವಿರುದ್ಧ ಸೆಣೆಸಾಟ ನಡೆಸಲಿದೆ.
ಆದರೆ ಟೀಮ್ ಇಂಡಿಯಾದ ಜೆರ್ಸಿ ಬಣ್ಣ ಈಗ ರಾಜಕೀಯ ಬಣ್ಣ ಪಡೆದುಕೊಂಡಿದ್ದು, ನರೇಂದ್ರ ಮೋದಿಯವರ ಸರ್ಕಾರ ದೇಶಾದ್ಯಂತ ಕೇಸರಿಕರಣ ಮಾಡಲು ಮುಂದಾಗಿದೆ. ಇದರ ಒಂದು ಭಾಗವಾಗಿ ಟೀಮ್ ಇಂಡಿಯಾ ಆಟಗಾರರಿಗೆ ಕೇಸರಿ ಬಣ್ಣದ ಜೆರ್ಸಿ ಧರಿಸುವಂತೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ಕೆಲ ಮುಖಂಡರು ಕಿಡಿ ಕಾರಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…