ಇಂಗ್ಲೆಂಡ್ ವಿರುದ್ಧ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಿದ ಆಸ್ಟ್ರೇಲಿಯಾ -Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಲಂಡನ್ : ಲಾರ್ಡ್ಸ್ ಕ್ರಿಡಾಂಗಣದಲ್ಲಿ ಇಂದು ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ತವರು ನೆಲದಲ್ಲಿಯೇ ಇಂಗ್ಲೆಂಡ್ ತಂಡವನ್ನು 64 ರನ್ ಗಳ ಅಂತರದಿಂದ ಸೋಲಿಸಿದ ಆಸ್ಟ್ರೇಲಿಯಾ ಸೆಮಿ ಫೈನಲ್ ಪ್ರವೇಶಿಸಿದೆ. ಈ ಮೂಲಕ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡ ಎಂದೆನಿಸಿಕೊಂಡಿದೆ

5 ಬಾರಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ 2019 ರ ಏಕದಿನ ವಿಶ್ವಕಪ್ ನಲ್ಲಿ ಅಂತಿಮ 4ರ ಘಟ್ಟ ಪ್ರವೇಶಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಂಗಳವಾರ ನಡೆದ ರೋಚಕ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ 64 ರನ್ ಅಂತರದ ಗೆಲುವು ದಾಖಲಿಸಿದೆ.

ಹಾಲಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡವಾಗಿದೆ. ಈ ವಿಶ್ವಕಪ್ ನಲ್ಲಿ ಆಡಿರುವ 7 ಪಂದ್ಯಗಳಲ್ಲಿ 6 ಗೆಲುವು ಮತ್ತು ಒಂದು ಸೋಲಿನೊಂದಿಗೆ 12 ಅಂಕ ಪಡೆದ ಆಸ್ಟ್ರೇಲಿಯಾ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.