ಭಾರತೀಯ ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಇಂಟರ್ನ್ಯಾಷನಲ್ ಫುಟ್ಬಾಲ್ಗೆ ವಿದಾಯ ಹೇಳುವುದಾಗಿ ಛೆಟ್ರಿ ತಿಳಿಸಿದ್ದಾರೆ. 39 ವರ್ಷ ವಯಸ್ಸಿನ ಸುನಿಲ್, ಭಾರತದ ಪರ ಈವರೆಗೆ 150 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 94 ಗೋಲುಗಳನ್ನು ಗಳಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಇದೀಗ ಕುವೈತ್ ವಿರುದ್ಧದ ವಿಶ್ವಕಪ್ ಅರ್ಹತಾ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಸುನಿಲ್ ಛೆಟ್ರಿ ನಿರ್ಧರಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಸುನಿಲ್ ಛೆಟ್ರಿ, ನಾನು ಎಂದಿಗೂ ಮರೆಯದ ಮತ್ತು ಆಗಾಗ್ಗೆ ನೆನಪಿಸಿಕೊಳ್ಳುವ ಒಂದು ದಿನವಿದೆ. ಅದು ನನ್ನ ದೇಶಕ್ಕಾಗಿ ಆಡಿದ ಮೊದಲ ಪಂದ್ಯದ ದಿನ. ಅದು ನಂಬಲಸಾಧ್ಯವಾಗಿತ್ತು. ಅಂದು ಬೆಳಿಗ್ಗೆ ರಾಷ್ಟ್ರೀಯ ತಂಡದ ಕೋಚ್ ಸುಖಿ ಸರ್, ನನ್ನ ಬಳಿಗೆ ಬಂದು ಆಡುತ್ತೀರಿ ಎಂದರು. ಆ ಅನುಭವವನ್ನು ಹೇಳಲಾಸಾಧ್ಯ. ನಾನು ನನ್ನ ಜರ್ಸಿಯನ್ನು ತೆಗೆದುಕೊಂಡೆ. ಅಲ್ಲದೆ ಅದ ಮೇಲೆ ಸ್ವಲ್ಪ ಸುಗಂಧ ದ್ರವ್ಯವನ್ನು ಸಿಂಪಡಿಸಿದೆ. ಏಕೆ ಎಂಬುದು ನಿಜಕ್ಕೂ ನನಗೆ ತಿಳಿದಿಲ್ಲ.
ಆ ದಿನ, ನನ್ನ ಚೊಚ್ಚಲ ಪಂದ್ಯದಲ್ಲಿ ನನ್ನ ಮೊದಲ ಗೋಲು… ಬಹುಶಃ ನಾನು ಎಂದಿಗೂ ಮರೆಯುವುದಿಲ್ಲ. ಅಲ್ಲದೆ ನನ್ನ ರಾಷ್ಟ್ರೀಯ ತಂಡದ ಪ್ರಯಾಣದ ಅತ್ಯುತ್ತಮ ದಿನಗಳನ್ನು ಸಹ ಮರೆಯಲಾರೆ ಎಂದು ಸುನಿಲ್ ಛೆಟ್ರಿ ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…