Featured

ಇಂಡಿಯಾ ಗೇಟ್‍ನಲ್ಲಿ ಸುಭಾಷ್ ಚಂದ್ರಬೋಸ್ ಅವರ ಪ್ರತಿಮೆ ಅನಾವರಣ : ಪ್ರಧಾನಿ ಮೋದಿ  – Vishwanews24

ಇಂಡಿಯಾ ಗೇಟ್‍ನಲ್ಲಿ ಸುಭಾಷ್ ಚಂದ್ರಬೋಸ್ ಅವರ ಪ್ರತಿಮೆ ಅನಾವರಣ : ಪ್ರಧಾನಿ ಮೋದಿ  – Vishwanews24

ನವದೆಹಲಿ: ನೇತಾಜಿ ಸುಭಾಷ್ ಚಂದ್ರಬೋಸ್ ಅವರ 125ನೇ ಜನ್ಮದಿನದ ಅಂಗವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಸುಭಾಷ್ ಚಂದ್ರಬೋಸ್ ಅವರ ಪ್ರತಿಮೆಯನ್ನು ಅನಾವರಣಗೊಳಿಸುವುದಾಗಿ ತಿಳಿಸಿದ್ದಾರೆ.

ಸುಭಾಷ್ ಚಂದ್ರ ಬೋಸ್ ಅವರು 1897ರ ಜನವರಿ 23ರಂದು ಜನಿಸಿದ್ದು, ಭಾನುವಾರ ಸುಭಾಷ್ ಚಂದ್ರಬೋಸ್ ಅವರ ಪ್ರತಿಮೆಯನ್ನು ದೆಹಲಿಯ ಇಂಡಿಯಾ ಗೇಟ್‍ನಲ್ಲಿ ಸ್ಥಾಪಿಸುವುದಾಗಿ ಮೋದಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆ ಪೂರ್ಣಗೊಳ್ಳುವವರೆಗೂ, ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಅದೇ ಸ್ಥಳದಲ್ಲಿ ಇರುತ್ತದೆ. ಜನವರಿ 23ರಂದು ನೇತಾಜಿ ಅವರ ಹುಟ್ಟುಹಬ್ಬದ ದಿನ ಹೊಲೊಗ್ರಾಮ್ ಪ್ರತಿಮೆಯನ್ನು ನಾನು ಅನಾವರಣಗೊಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಮುನ್ನ ಕಿಂಗ್ ಜಾರ್ಜ್ ವಿ ಅವರ ಪ್ರತಿಮೆ ಈ ಸ್ಥಳದಲ್ಲಿತ್ತು. ಆದರೆ ಅದನ್ನು 1968ರಲ್ಲಿ ತೆಗೆದುಹಾಕಲಾಗಿತ್ತು. ಇದೀಗ ನೇತಾಜಿ ಅವರ ಗ್ರಾನೈಟ್ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ.

ಇಡೀ ರಾಷ್ಟ್ರ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮದಿನವನ್ನು ಆಚರಿಸುತ್ತಿರುವ ಸಮಯದಲ್ಲಿ, ಗ್ರಾನೈಟ್‍ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್‍ನಲ್ಲಿ ಸ್ಥಾಪಿಸಲಾಗುತ್ತಿದೆ ಎಂಬ ವಿಚಾರವನ್ನು ಹಂಚಿಕೊಳ್ಳಲು ನನಗೆ ಸಂತೋಷವಾಗುತ್ತಿದೆ. ಭಾರತ ಅವರಿಗೆ ಚಿರಋಣಿಯಾಗಿರುತ್ತದೆ ಎಂಬುವುದನ್ನು ಇದು ಸೂಚಿಸುತ್ತದೆ ಎಂದು ತಿಳಿಸಿದ್ದಾರೆ.

ಈ ಮುನ್ನ ಬಿಜೆಪಿ ನಾಯಕರಾಗಿರುವ ಚಂದ್ರಬೋಸ್ ಅವರು ದೆಹಲಿಯ ಇಂಡಿಯಾ ಗೇಟ್ ಎದುರು ನೇತಾಜಿ ಅವರ ಪ್ರತಿಮೆ ಸ್ಥಾಪಿಸುವಂತೆ ಕೋರಿ ಪ್ರಧಾನಿ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದರು. ಕರೆನ್ಸಿ ನೋಟುಗಳ ಮೇಲೆ ನೇತಾಜಿ ಅವರ ಭಾವ ಚಿತ್ರವನ್ನು ಮುದ್ರಿಸಲು ಮತ್ತು ಜನವರಿ 23ರಂದು ರಾಷ್ಟ್ರೀಯ ರಜಾ ದಿನವೆಂದು ಘೋಷಿಸುವಂತೆ ಪ್ರಧಾನಿ ಬಳಿ ಮನವಿ ಮಾಡಿದ್ದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

6 hours ago