ಜಕಾರ್ತ: ಸುಲಾವೆಸಿ ದ್ವೀಪದಲ್ಲಿ ಶುಕ್ರವಾರ ಸಂಭವಿಸಿದ 7.5 ರಿಕ್ಟರ್ ಮಾಪಕ ತೀವ್ರತೆಯ ಭೂಕಂಪದ ಪರಿಣಾಮದಿಂದ ಅಪ್ಪಳಿಸಿರುವ ಸುನಾಮಿಯಿಂದಾಗಿ ಇಂಡೋನೇಷ್ಯಾದ ಪಲು ನಗರದಲ್ಲಿ ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ.
ಹಲವಾರು ಮೂಲಗಳ ಈ ಕುರಿತು ಮಾಹಿತಿ ನೀಡಿದ್ದು, ಇದುವರೆಗೂ 30 ಜನರು ಮೃತಪಟ್ಟಿದ್ದಾರೆ. ಇದಲ್ಲದೆ ಗಾಯಗೊಂಡಿರುವ 12 ಜನರಿಗೆ ಮೂಳೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿದುಬಂದಿದೆ.ಕುಸಿದ ಕಟ್ಟಡಗಳ ಅಡಿ ಮತ್ತು ಸುನಾಮಿ ಅಪ್ಪಳಿಸಿದ ಕಡೆಗಳಲ್ಲಿ ಹಲವಾರು ಮೃತದೇಹಗಳು ಪತ್ತೆಯಾಗುತ್ತಿದ್ದು, ಸಂಖ್ಯೆಯು ಇನ್ನೂ ಹೆಚ್ಚಾಗಿರುವ ಸಾಧ್ಯತೆಗಳಿವೆ.
ಡೊಂಗ್ಗಾಲಾ ನಗರದಿಂದ 32 ಕಿ.ಮೀ. ದೂರದಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿದ್ದು, ಪಲು ಪಟ್ಟಣಕ್ಕೆ ಅಪ್ಪಳಿಸಿದ 2 ಮೀಟರ್ಗೂ ಹೆಚ್ಚು ಎತ್ತರದ ಅಲೆಗಳಿಂದಾಗಿ ಮನೆಗಳು ಕುಸಿದುಬಿದ್ದಿವೆ. ಕಾರುಗಳು, ಟ್ರಕ್ಗಳು ಕೊಚ್ಚಿಹೋಗಿ ಜನರು ನಿರಾಶ್ರಿತರಾಗಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…