ಜಕಾರ್ತ: 189 ಮಂದಿ ಪ್ರಯಾಣಿಕರಿದ್ದ ಇಂಡೋನೇಷ್ಯಾ ಲಯನ್ ಏರ್’ಲೈನ್ಸ್ ಪ್ರಯಾಣಿಕ ವಿಮಾನ ಸಮುದ್ರದಲ್ಲಿ ಪತನಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಇಂದು ಬೆಳಗ್ಗೆ ರಾಜಧಾನಿ ಜಕಾರ್ತದಿಂದ ಪಾಂಗ್‍ಕಲ್ ಪಿನಾಗ್ ದ್ವೀಪಕ್ಕೆ ಲಯನ್ಸ್ ಏರ್‌ಲೈನ್ಸ್ ಸಂಸ್ಥೆಗೆ ಸೇರಿದ್ದ ಜಿಟಿ610 ವಿಮಾನ ಎಂದಿನಂತೆ 6.20ರ ಸುಮಾರಿಗೆ ಟೇಕ್ ಆಫ್ ಆಗಿ ಹೊರಟಿತ್ತು. ಸುಮಾರು 7.30ರ ಹೊತ್ತಿಗೆ ಪಾಂಗ್‍ಕಲ್ ಪಿನಾಂಗ್ ತಲುಪಬೇಕಿತ್ತು. ಆದರೆ ಟೇಕಾಫ್ ಆದ 13 ನಿಮಿಷಗಳ ಬಳಿಕ ಏಕಾಏಕಿ ರೇಡಾರ್ ಸಂಪರ್ಕದಿಂದ ವಿಮಾನ ನಾಪತ್ತೆಯಾಗಿತ್ತು. ಅಲ್ಲದೇ ಕೊನೆಯ ಬಾರಿಗೆ ಜಿಟಿ610 ವಿಮಾನವು ಬೋಯಿಂಗ್ 737 ಮ್ಯಾಕ್ಸ್ 8 ಲಯನ್ ವಿಮಾನದ ಸಂಪರ್ಕಕ್ಕೆ 6.33ರಲ್ಲಿ ಯತ್ನಿಸಿತ್ತು. ಇದಾದ ಬಳಿಕ ಪಾಂಗ್‍ಕಲ್ ದ್ವೀಪದ ಬಳಿ ಸಮುದ್ರದಲ್ಲಿ ವಿಮಾನ ಪತನಗೊಂಡಿದೆ.
ವಿಮಾನ ಬೀಳುತ್ತಿರುವ ದೃಶ್ಯವನ್ನು ಜಕಾರ್ತ ಬಂದರಿನಿಂದ ಹೊರಟಿದ್ದ ಬೋಟ್ ಸಿಬ್ಬಂದಿ ನೋಡಿದ್ದು, ಕೂಡಲೇ ರಕ್ಷಣಾ ತಂಡಗಳಿಗೆ ವಿಷಯವನ್ನು ಮುಟ್ಟಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ರಕ್ಷಣಾ ತಂಡಗಳು ಪ್ರಯಾಣಿಕರಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿವೆ. ಅಲ್ಲದೇ ವಿಮಾನ ಪತನವಾದ ಸ್ಥಳದಲ್ಲಿ ವಿಮಾನದ ಅವಶೇಷಗಳು ಸಹ ಪತ್ತೆಯಾಗಿವೆ.
ಸುಮಾರು 210 ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವನ್ನು ಈ ವಿಮಾನ ಹೊಂದಿತ್ತು. ದುರಂತದ ವೇಳೆ ವಿಮಾನದಲ್ಲಿ 189 ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ದುರಂತದಲ್ಲಿ ಬದುಕುಳಿದಿರಬಹುದಾದ ಪ್ರಯಾಣಿಕರಿಗಾಗಿ ಶೋಧ ಹಾಗೂ ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…