ಬೆಂಗಳೂರು: ಕನಿಷ್ಠ ಜ್ಙಾನವೂ ಇಲ್ಲದ ನಳೀನ್ ಕುಮಾರ್ ಕಟೀಲ್ ಅವರನ್ನುಬಿಜೆಪಿಯವರು ಯಾಕೆ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ರೊ ಗೊತ್ತಿಲ್ಲ. ಅವರಿಗೆ ಆದಾಯ ತೆರಿಗೆ (ಐಟಿ) ಇಲಾಖೆ ಮತ್ತು ಜಾರಿ ನಿರ್ದೇಶನಾಲಯ(ಇ.ಡಿ.) ಯಾರ ಅಧೀನದಲ್ಲಿವೆ ಎಂಬುದು ಗೊತ್ತಿದೆಯೇ ಎಂದು ಕಟೀಲ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯನವರಿಂದಲೇ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಜೈಲಿಗೆ ಹೋದರು ಎಂದು ಭಾನುವಾರ ಕಟೀಲ್ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಕೇಂದ್ರ ಸರ್ಕಾರದ ಅಧೀನದಲ್ಲಿವೆ. ಈ ಕುರಿತು ಅವರಿಗೆ ತಿಳಿದಿಲ್ಲವೇ? ಇಂತಹವರನ್ನು ಯಾಕೆ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೋ? ಹುಳಿ ಹಿಂಡುವುದು, ಬೆಂಕಿ ಹಚ್ಚುವುದೇ ಅವರ ಕೆಲಸ ಎಂದು ವಾಗ್ದಾಳಿ ನಡೆಸಿದರು.
ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದ ಮೇಲೆ ವರ್ಗಾವಣೆ ಮಾಡುವುದು. ದ್ವೇಷದ ರಾಜಕಾರಣ ಮಾಡುವುದು ಅಷ್ಟೇ ಅವರ ಕೆಲಸವಾಗಿದೆ. ಅಧಿಕಾರ ವಹಿಸಿಕೊಂಡ ಮೊದಲ ದಿನ ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದಿದ್ದರು. ಆದರೆ, ಈಗ ಅವರು ಸಂಪೂರ್ಣವಾಗಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಎಂದು ಬಿಎಸ್ವೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಲಾಗಿದ್ದ ಕೃಷಿ ಹೊಂಡ, ಅನ್ನಭಾಗ್ಯ,ಇಂದಿರಾ ಕ್ಯಾಂಟೀನ್ ಬಗ್ಗೆ ತನಿಖೆ ಮಾಡಿ ಅಂತಾರೆ. ಅಕ್ರಮ, ಭ್ರಷ್ಟಾಚಾರ ನಡೆದಿದ್ದರೆ ತನಿಖೆ ಮಾಡಲಿ. ನಾವು ಕಾನೂನಿಗೆ ಅಡ್ಡ ಬರುವುದಿಲ್ಲ. ಆದರೆ ದ್ವೇಷ ಸೇಡಿನಿಂದ ರಾಜಕಾರಣ ಮಾಡಬಾರದು. ದ್ವೇಷದಿಂದ ರಾಜ್ಯದ ಅಭಿವೃದ್ಧಿಯಾಗುವುದಿಲ್ಲ. ರೈತರು ಕೃಷಿ ಹೊಂಡ ಯೋಜನೆಯನ್ನು ಸ್ವಾಗತಿಸಿದ್ದರು. ಈಗ ಯಾರದೋ ಮಾತು ಕೇಳಿ ಅದನ್ನು ತನಿಖೆಗೆ ಕೊಟ್ಟಿದ್ದಾರೆ. ಇಂತಹ ರಾಜಕಾರಣ ಬಹಳ ದಿನ ಉಳಿಯುವುದಿಲ್ಲ. ನಾನು ಐದು ವರ್ಷ ಅಧಿಕಾರ ಮಾಡಿದ್ದೆ. ಆದರೆ, ಯಾರ ಮೇಲೂ ದ್ವೇಷದ ರಾಜಕಾರಣ ಮಾಡಲಿಲ್ಲ. ದ್ವೇಷದ ರಾಜಕಾರಣ ಮಾಡಲೂಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…