Featured

ಇಂತವರನ್ನ ಬಿಜೆಪಿಯವರು ಯಾಕೆ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ರೊ ಗೊತ್ತಿಲ್ಲ: ನಳಿನ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ -Vishwanews24

ಬೆಂಗಳೂರು: ಕನಿಷ್ಠ ಜ್ಙಾನವೂ ಇಲ್ಲದ ನಳೀನ್​​ ಕುಮಾರ್ ಕಟೀಲ್​​​ ಅವರನ್ನುಬಿಜೆಪಿಯವರು ಯಾಕೆ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ರೊ ಗೊತ್ತಿಲ್ಲ. ಅವರಿಗೆ ಆದಾಯ ತೆರಿಗೆ (ಐಟಿ) ಇಲಾಖೆ ಮತ್ತು ಜಾರಿ ನಿರ್ದೇಶನಾಲಯ(ಇ.ಡಿ.) ಯಾರ ಅಧೀನದಲ್ಲಿವೆ ಎಂಬುದು ಗೊತ್ತಿದೆಯೇ ಎಂದು ಕಟೀಲ್​​​​ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯನವರಿಂದಲೇ ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಜೈಲಿಗೆ ಹೋದರು ಎಂದು ಭಾನುವಾರ ಕಟೀಲ್​ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಕೇಂದ್ರ ಸರ್ಕಾರದ ಅಧೀನದಲ್ಲಿವೆ. ಈ ಕುರಿತು ಅವರಿಗೆ ತಿಳಿದಿಲ್ಲವೇ? ಇಂತಹವರನ್ನು ಯಾಕೆ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೋ? ಹುಳಿ ಹಿಂಡುವುದು, ಬೆಂಕಿ ಹಚ್ಚುವುದೇ ಅವರ ಕೆಲಸ ಎಂದು ವಾಗ್ದಾಳಿ ನಡೆಸಿದರು.

ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದ ಮೇಲೆ ವರ್ಗಾವಣೆ ಮಾಡುವುದು. ದ್ವೇಷದ ರಾಜಕಾರಣ ಮಾಡುವುದು ಅಷ್ಟೇ ಅವರ ಕೆಲಸವಾಗಿದೆ. ಅಧಿಕಾರ ವಹಿಸಿಕೊಂಡ ಮೊದಲ ದಿನ ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದಿದ್ದರು. ಆದರೆ, ಈಗ ಅವರು ಸಂಪೂರ್ಣವಾಗಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಎಂದು ಬಿಎಸ್​ವೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಲಾಗಿದ್ದ ಕೃಷಿ ಹೊಂಡ, ಅನ್ನಭಾಗ್ಯ,ಇಂದಿರಾ ಕ್ಯಾಂಟೀನ್ ಬಗ್ಗೆ ತನಿಖೆ ಮಾಡಿ ಅಂತಾರೆ. ಅಕ್ರಮ, ಭ್ರಷ್ಟಾಚಾರ ನಡೆದಿದ್ದರೆ ತನಿಖೆ ಮಾಡಲಿ. ನಾವು ಕಾನೂನಿಗೆ ಅಡ್ಡ ಬರುವುದಿಲ್ಲ. ಆದರೆ ದ್ವೇಷ ಸೇಡಿನಿಂದ ರಾಜಕಾರಣ ಮಾಡಬಾರದು. ದ್ವೇಷದಿಂದ ರಾಜ್ಯದ ಅಭಿವೃದ್ಧಿಯಾಗುವುದಿಲ್ಲ. ರೈತರು ಕೃಷಿ ಹೊಂಡ ಯೋಜನೆಯನ್ನು ಸ್ವಾಗತಿಸಿದ್ದರು. ಈಗ ಯಾರದೋ ಮಾತು ಕೇಳಿ ಅದನ್ನು ತನಿಖೆಗೆ ಕೊಟ್ಟಿದ್ದಾರೆ. ಇಂತಹ ರಾಜಕಾರಣ ಬಹಳ ದಿನ ಉಳಿಯುವುದಿಲ್ಲ. ನಾನು ಐದು ವರ್ಷ ಅಧಿಕಾರ ಮಾಡಿದ್ದೆ. ಆದರೆ, ಯಾರ ಮೇಲೂ ದ್ವೇಷದ ರಾಜಕಾರಣ ಮಾಡಲಿಲ್ಲ. ದ್ವೇಷದ ರಾಜಕಾರಣ ಮಾಡಲೂಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

7 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

7 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

7 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

7 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

7 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

8 hours ago