ಇಂತಹವರು ವಂದೇ ಮಾತರಂ ಕೇಳಲೂ ಕೂಡ ಯೋಗ್ಯರಲ್ಲ : ಅಮೂಲ್ಯಗೆ ಮಹೇಶ್ ವಿಕ್ರಮ್ ಹೆಗ್ಡೆ -Vishwanews24

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ವಂದೇ ಮಾತರಂ ಹಾಡಿ ಎಂದು ಪೀಡಿಸಿದ್ದ ಅಮೂಲ್ಯಗೆ ತಿರುಗೇಟು ನೀಡಿರುವ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ವಂದೇ ಮಾತರಂ ಕೇಳಲೂ ಕೂಡ ಇವರು ಯೋಗ್ಯರಲ್ಲ ಎಂದು ಹೇಳಿದ್ದಾರೆ.

ನಿನ್ನೆ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಅಮೂಲ್ಯ ವಿರುದ್ಧ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಕಿಡಿಕಾರಿದ್ದು, ಇಂತಹವರು ವಂದೇ ಮಾತರಂ ಕೇಳಲೂ ಕೂಡ ಯೋಗ್ಯರಲ್ಲ ಎಂದು ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ವಿಕ್ರಮ್ ಮಹೇಶ್ ಹೆಗ್ಡೆ, ‘ಇದೇ ಕಾರಣಕ್ಕೆ ನಾನು ಅಂದು ವಿಮಾನ ನಿಲ್ದಾಣದಲ್ಲಿ ಮೌನವಹಿಸಿದ್ದೆ. ಇಂತಹವರು ವಂದೇ ಮಾತರಂ ಗೀತೆ ಕೇಳಲೂ ಕೂಡ ಯೋಗ್ಯರಲ್ಲ. ಕೇವಲ ಪ್ರಚಾರಕ್ಕಾಗಿ ಇಂತಹ ಗಿಮಿಕ್ ಗಳನ್ನು ಮಾಡುತ್ತಾರೆ. ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಪೊಲೀಸರು ಕ್ರೂರವಾಗಿ ಶಿಕ್ಷಿಸಬೇಕು. ಪಾಕಿಸ್ತಾನ ಪದದಲ್ಲಿದ ಪಾ ಅಕ್ಷರವನ್ನೂ ಕೂಡ ಉಚ್ಥರಿಸಲು ಅವರು ಭಯಪಡಬೇಕು. ಇಂತಹ ಟ್ರೆಂಡ್ ಅಪಾಯಕಾರಿಯಾಗಿದ್ದು, ಕೂಡಲೇ ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ಈ ಹಿಂದೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್‌ ವಿಕ್ರಂ ಹೆಗ್ಡೆ ಅವರಿಗೆ ವಂದೇ ಮಾತರಂ ಹಾಡುವಂತೆ ಪೀಡಿಸಿದ್ದರು. ಅಲ್ಲದೆ ವಂದೇ ಮಾತರಂ ಗೀತೆ ಹಾಡುವ ಮೂಲಕ ನಿಮ್ಮ ದೇಶಭಕ್ತಿ ತೋರಿಸಿ ಎಂದು ಕಾಡಿದ್ದಳು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

21 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

21 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago