Featured

ಇಂತಹ ಉತ್ತಮ ಸಮಯ ಕಳೆದುಕೊಂಡರೆ ಮತ್ತೆ ಸಿಗಲ್ಲ : ಪ್ರಧಾನಮಂತ್ರಿ ಸ್ಥಾನಕ್ಕೆ ಮೋದಿ ಹೆಸರು ಅನುಮೋದಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್  – vishwanews24

ಇಂಡಿಯಾ ಬೆಳೆಯುತ್ತಿದೆ , ಉತ್ತಮ ನಾಯಕ, ಉತ್ತಮ ಸಮಯ ಮತ್ತೆ ಸಿಗುವುದಿಲ್ಲ..

ಇದು ನಮಗೆ ಉತ್ತಮ ಅವಕಾಶ. ಈಗ ಇದನ್ನು ಕಳೆದುಕೊಂಡರೆ ಮತ್ತೆ ಸಿಗುವುದಿಲ್ಲ..

ಬಿಹಾರದಲ್ಲಿ ಏನು ಬಾಕಿ ಉಳಿದಿದೆ ಅದನ್ನು ಕೂಡ ಮೋದಿಯವರು ಮಾಡಲಿದ್ದಾರೆ.. : ಬಿಹಾರ ಸಿಎಂ ನಿತೀಶ್ ಕುಮಾರ್

ನವದೆಹಲಿ: ಇಂತಹ ಉತ್ತಮ ಸಮಯ ಕಳೆದುಕೊಂಡರೆ ಮತ್ತೆ ಸಿಗಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಪ್ರಧಾನಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿಯವರ ಹೆಸರನ್ನು ಅನುಮೋದಿಸಿದ್ದಾರೆ.

ಇಂದು ದೆಹಲಿಯಲ್ಲಿ ನಡೆದ ಎನ್‍ಡಿಎ ಒಕ್ಕೂಟ ಸಂಸದರ ಸಭೆಯಲ್ಲಿ ಎಲ್ಲಾ ನಾಯಕರು ಮೋದಿ ಹೆಸರನ್ನೇ ಪ್ರಧಾನಿ ಸ್ಥಾನಕ್ಕೆ ಸೂಚಿಸಿದ್ದಾರೆ. ಬಳಿಕ ಮಾತನಾಡಿದ ಜೆಡಿಯು ನಾಯಕ ನಿತೀಶ್ ಕುಮಾರ್ ಇಂಡಿಯಾ ಬೆಳೆಯುತ್ತಿದೆ. ಉತ್ತಮ ನಾಯಕ, ಉತ್ತಮ ಸಮಯ ಮತ್ತೆ ಸಿಗುವುದಿಲ್ಲ. ಇದು ನಮಗೆ ಉತ್ತಮ ಅವಕಾಶ. ಈಗ ಇದನ್ನು ಕಳೆದುಕೊಂಡರೆ ಮತ್ತೆ ಸಿಗುವುದಿಲ್ಲ ಎಂದು ಹೇಳಿದರು.

ಮೋದಿಯವರು ದೇಶದ ಸೇವೆ ಮಾಡಿದ್ದಾರೆ, ಮುಂದಿನ ಅವಧಿಯಲ್ಲಿ ಏನು ಬಾಕಿ ಉಳಿದಿದೆಯೋ ಅದನ್ನೂ ಮಾಡಲಿದ್ದಾರೆ. ಮೋದಿ ಅವರಿಗೆ ಈಗ ಮತ್ತೊಂದು ಅವಕಾಶ ಸಿಕ್ಕಿದೆ. ಅಲ್ಲೂ ಇಲ್ಲೂ ಕೆಲವರು ಗೆದ್ದಿದ್ದಾರೆ. ಆದರೆ ಮುಂದಿನ ಬಾರಿ ಎಲ್ಲರೂ ಸೋಲಲಿದ್ದಾರೆ ಎಂದು ನಿತೀಶ್‌ ಕುಮಾರ್‌ ಹೇಳಿದರು.

ಬಿಹಾರದಲ್ಲಿ ಏನು ಬಾಕಿ ಉಳಿದಿದೆ ಅದನ್ನು ಕೂಡ ಮೋದಿಯವರು ಮಾಡಲಿದ್ದಾರೆ. ಅದಕ್ಕಾಗಿ ನಾವು ಎಲ್ಲಾ ಬೆಂಬಲ ನೀಡಿದ್ದೇವೆ. ಆದಷ್ಟು ಬೇಗ ಅವರು ಪ್ರಧಾನಿಯಾಗಲಿ. ಇವತ್ತೆ ಪ್ರಧಾನಿಯಾಗಬೇಕಿತ್ತು. ಆ ಕಡೆ ಈ ಕಡೆ ಹೋಗುವವರಿಗೆ ಯಾವುದೇ ಲಾಭ ಇಲ್ಲ ಎಂದು ಇದೇ ವೇಳೆ ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟಕ್ಕೆ ಟಾಂಗ್ ಕೊಟ್ಟರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago