ಬೆಂಗಳೂರು: ಹುಬ್ಬಳ್ಳಿ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ಕುರಿತು ನಟಿ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಗಾರನಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಕರಣ ಕುರಿತು ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಾಕಿರುವ ರಚಿತಾ ರಾಮ್, ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ.
ಜಾತಿ, ಧರ್ಮ ಯಾವುದೇ ಆಗಿರಲಿ. ಮೊದಲು ನಾವು ಮಾನವರು. ನಾನು ಈ ಪೋಸ್ಟ್ ಹಾಕಲು ಕಾರಣ ಆಕೆಗೆ (ನೇಹಾ) ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ ಎಂದು ನಟಿ ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರಕ್ಕೆ ನನ್ನ ಒಂದು ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ.
ನಟಿ ರಚಿತಾ ರಾಮ್, ಕೊಲೆಯಾದ ನೇಹಾ ಹಿರೇಮಠ್ ಫೋಟೊ ಜೊತೆಗೆ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅಲ್ಲದೇ #wewantjustice ಎಂದು ಟ್ಯಾಗ್ ಕೂಡ ಹಾಕಿದ್ದಾರೆ.
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…
ಉಡುಪಿ: ಎ.10ರಂದು ನೇರ ಸಂದರ್ಶನ ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟವರ್ಸ್‌ನ ಹರ್ಷ ರೀಟೇಲ್…
ಮಂಗಳೂರು : ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿ ಮಂಗಳೂರು: ತಿಂಗಳ ರಜೆ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ…
ಪಡುಬಿದ್ರಿ : ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ ವಂಚನೆ ; ₹1.50 ಲಕ್ಷ ಕಳೆದುಕೊಂಡ ಮಹಿಳೆ ಪಡುಬಿದ್ರಿ: ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ…
ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ: ಬಿಜೆಪಿಯಿಂದ ತೀವ್ರ ಹೋರಾಟದ ಎಚ್ಚರಿಕೆ ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯದಿಂದಾಗಿ ಜನ…