Featured

ಇಂಥ ಕೆಟ್ಟ ರಾಜಕೀಯವನ್ನು ನಾನು ಎಂದೂ ನೋಡಿರಲಿಲ್ಲ : ಸಿದ್ದರಾಮಯ್ಯ ಆಕ್ರೋಶ – Vishwanews24

ಇಂಥ ಕೆಟ್ಟ ರಾಜಕೀಯವನ್ನು ನಾನು ಎಂದೂ ನೋಡಿರಲಿಲ್ಲ

ಮತ್ತೆ ನಾವು ಅಧಿಕಾರಕ್ಕೆ ಬಂದು ಎಲ್ಲವನ್ನೂ ತನಿಖೆ ಮಾಡಿಸಿ ಭ್ರಷ್ಟಾಚಾರ ಬಯಲಿಗೆಳೆಯುತ್ತೇವೆ : ಸಿದ್ದರಾಮಯ್ಯ

ಬೆಂಗಳೂರು: ಈ ಸರ್ಕಾರ ರಾಜ್ಯದ ಬೊಕ್ಕಸವನ್ನು ಬೇಕಾಬಿಟ್ಟಿಯಾಗಿ ಲೂಟಿ ಮಾಡಲು ಆರಂಭ ಮಾಡಿದೆ. ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು ಚುನಾವಣೆಗೆ ದುಡ್ಡು ಮಾಡಿಕೊಳ್ಳುವ ಉದ್ದೇಶದಿಂದ ಯಾವೆಲ್ಲ ಶಾಸಕರಿಗೆ ಮಂತ್ರಿ ಆಗದೆ ಇರುವುದರಿಂದ ಅಸಮಧಾನ ಇದೆ ಅವರಿಗೆ ದುಡ್ಡು ಮಾಡಿಕೊಡಲು ತರಾತುರಿನಲ್ಲಿ ಕೆಬಿಜೆಎಲ್‌ ನಲ್ಲಿ, ವಿಶ್ವೇರಯ್ಯ ನೀರಾವರಿ ನಿಗಮದಲ್ಲಿ, ಕರ್ನಾಟಕ ನೀರಾವರಿ ನಿಗಮದಲ್ಲಿ ಸಭೆಯನ್ನು ಕರೆದು ಯೋಜನೆಗಳಿಗೆ ಅನುಮೋದನೆ ಪಡೆಯುತ್ತಿದ್ದಾರೆ.

ಇದರಲ್ಲಿ ಪಾರದರ್ಶಕತೆ ಇಲ್ಲ. ಟೆಂಡರ್‌ ಹಣವನ್ನು ಕೂಡ ಎರಡು, ಮೂರು ಪಟ್ಟು ಹೆಚ್ಚಿಗೆ ಮಾಡಿಕೊಂಡಿದ್ದಾರೆ, ರಾಜ್ಯದಲ್ಲಿ ಜನಜನಿತವಾಗಿರುವ 40% ಕಮಿಷನ್‌ ನ ಮುಂದುವರೆದ ಭಾಗವಿದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿ ಮಾತನಾಡಿದ ಅವರು, ಜನರ ತೆರಿಗೆ ಹಣವನ್ನು ರಕ್ಷಣೆ ಮಾಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿ. ಟೆಂಡರ್‌ ಹಣವನ್ನು ಹೆಚ್ಚು ಮಾಡಿದ್ದಾರೆ, ಯಾರು ಹೆಚ್ಚು ಕಮಿಷನ್‌ ನೀಡುತ್ತಾರೆ ಅವರಿಗೆ ಕಾಮಗಾರಿ ಕೊಡುತ್ತಿದ್ದಾರೆ, ತಮಗೆ ಬೇಕಾದ ಗುತ್ತಿಗೆದಾರರನ್ನು ಹುಡುಕಿ ಕೆಲಸ ನೀಡುತ್ತಿದ್ದಾರೆ. ಹೀಗೆ ಮಾಡಿ ಕಮಿಷನ್‌ ವಸೂಲಿ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೋಕೋಪಯೋಗಿ, ನೀರಾವರಿ, ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸುಮಾರು 20,000 ಕೋಟಿ ರೂ. ಬಾಕಿ ಬಿಲ್‌ ಇದೆ. 10% ಕಮಿಷನ್‌ ಕೊಟ್ಟವರಿಗೆ ಕೆಲಸ ಮಾರಾಟ ಮಾಡುವ ನಡೆಯುತ್ತಿದೆ, ಇದು ಮುಖ್ಯಮಂತ್ರಿ ಕಚೇರಿಯಿಂದಲೇ ಆರಂಭವಾದುದ್ದು. ಇದನ್ನು ತಡೆಗಟ್ಟಬೇಕಾದುದ್ದು ಅಗತ್ಯ. ಇದನ್ನು ಸದನದಲ್ಲಿ ಕೂಡ ಪ್ರಸ್ತಾಪ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಸರ್ಕಾರಕ್ಕೆ, ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ, ಮುಂದೆ ಕಾನೂನುಬಾಹಿರವಾಗಿ ಈ ರೀತಿ ಮಾಡಿದರೆ ನೀವು ಸಿಕ್ಕಿಹಾಕಿಕೊಳ್ಳುತ್ತೀರ, ಈ ವಿಚಾರವನ್ನು ತಾತ್ವಿಕ ಅಂತ್ಯ ಕಾಣಿಸುವವರೆಗೆ ನಾವು ಬಿಡುವುದಿಲ್ಲ. ನ್ಯಾಯಾಲಯದಲ್ಲಿ ಇವರ ವಿರುದ್ಧ ನಾವು ಸಿವಿಲ್‌ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತೇವೆ, ಇಂದು ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಗಾಳಿ ಬೀಸಲು ಆರಂಭವಾಗಿದೆ, ಹೀಗಾಗಿ ಮುಂದೆ ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ, ನಾವು ತನಿಖಾ ಆಯೋಗ ರಚನೆ ಮಾಡಿ ಎಲ್ಲವನ್ನೂ ತನಿಖೆ ಮಾಡಿಸಿ, ಯಾರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ ಅವೆಲ್ಲವನ್ನೂ ಬಯಲಿಗೆಳೆಯುತ್ತೇವೆ. ಇಂಥ ಕೆಟ್ಟ ರಾಜಕೀಯವನ್ನು ನಾನು ಎಂದೂ ನೋಡಿರಲಿಲ್ಲ ಎಂದರು.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

10 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

10 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

11 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

11 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

12 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

12 hours ago