ಬೆಂಗಳೂರು: ಈ ಸರ್ಕಾರ ರಾಜ್ಯದ ಬೊಕ್ಕಸವನ್ನು ಬೇಕಾಬಿಟ್ಟಿಯಾಗಿ ಲೂಟಿ ಮಾಡಲು ಆರಂಭ ಮಾಡಿದೆ. ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು ಚುನಾವಣೆಗೆ ದುಡ್ಡು ಮಾಡಿಕೊಳ್ಳುವ ಉದ್ದೇಶದಿಂದ ಯಾವೆಲ್ಲ ಶಾಸಕರಿಗೆ ಮಂತ್ರಿ ಆಗದೆ ಇರುವುದರಿಂದ ಅಸಮಧಾನ ಇದೆ ಅವರಿಗೆ ದುಡ್ಡು ಮಾಡಿಕೊಡಲು ತರಾತುರಿನಲ್ಲಿ ಕೆಬಿಜೆಎಲ್ ನಲ್ಲಿ, ವಿಶ್ವೇರಯ್ಯ ನೀರಾವರಿ ನಿಗಮದಲ್ಲಿ, ಕರ್ನಾಟಕ ನೀರಾವರಿ ನಿಗಮದಲ್ಲಿ ಸಭೆಯನ್ನು ಕರೆದು ಯೋಜನೆಗಳಿಗೆ ಅನುಮೋದನೆ ಪಡೆಯುತ್ತಿದ್ದಾರೆ.
ಇದರಲ್ಲಿ ಪಾರದರ್ಶಕತೆ ಇಲ್ಲ. ಟೆಂಡರ್ ಹಣವನ್ನು ಕೂಡ ಎರಡು, ಮೂರು ಪಟ್ಟು ಹೆಚ್ಚಿಗೆ ಮಾಡಿಕೊಂಡಿದ್ದಾರೆ, ರಾಜ್ಯದಲ್ಲಿ ಜನಜನಿತವಾಗಿರುವ 40% ಕಮಿಷನ್ ನ ಮುಂದುವರೆದ ಭಾಗವಿದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿ ಮಾತನಾಡಿದ ಅವರು, ಜನರ ತೆರಿಗೆ ಹಣವನ್ನು ರಕ್ಷಣೆ ಮಾಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿ. ಟೆಂಡರ್ ಹಣವನ್ನು ಹೆಚ್ಚು ಮಾಡಿದ್ದಾರೆ, ಯಾರು ಹೆಚ್ಚು ಕಮಿಷನ್ ನೀಡುತ್ತಾರೆ ಅವರಿಗೆ ಕಾಮಗಾರಿ ಕೊಡುತ್ತಿದ್ದಾರೆ, ತಮಗೆ ಬೇಕಾದ ಗುತ್ತಿಗೆದಾರರನ್ನು ಹುಡುಕಿ ಕೆಲಸ ನೀಡುತ್ತಿದ್ದಾರೆ. ಹೀಗೆ ಮಾಡಿ ಕಮಿಷನ್ ವಸೂಲಿ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲೋಕೋಪಯೋಗಿ, ನೀರಾವರಿ, ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸುಮಾರು 20,000 ಕೋಟಿ ರೂ. ಬಾಕಿ ಬಿಲ್ ಇದೆ. 10% ಕಮಿಷನ್ ಕೊಟ್ಟವರಿಗೆ ಕೆಲಸ ಮಾರಾಟ ಮಾಡುವ ನಡೆಯುತ್ತಿದೆ, ಇದು ಮುಖ್ಯಮಂತ್ರಿ ಕಚೇರಿಯಿಂದಲೇ ಆರಂಭವಾದುದ್ದು. ಇದನ್ನು ತಡೆಗಟ್ಟಬೇಕಾದುದ್ದು ಅಗತ್ಯ. ಇದನ್ನು ಸದನದಲ್ಲಿ ಕೂಡ ಪ್ರಸ್ತಾಪ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಸರ್ಕಾರಕ್ಕೆ, ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ, ಮುಂದೆ ಕಾನೂನುಬಾಹಿರವಾಗಿ ಈ ರೀತಿ ಮಾಡಿದರೆ ನೀವು ಸಿಕ್ಕಿಹಾಕಿಕೊಳ್ಳುತ್ತೀರ, ಈ ವಿಚಾರವನ್ನು ತಾತ್ವಿಕ ಅಂತ್ಯ ಕಾಣಿಸುವವರೆಗೆ ನಾವು ಬಿಡುವುದಿಲ್ಲ. ನ್ಯಾಯಾಲಯದಲ್ಲಿ ಇವರ ವಿರುದ್ಧ ನಾವು ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತೇವೆ, ಇಂದು ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸಲು ಆರಂಭವಾಗಿದೆ, ಹೀಗಾಗಿ ಮುಂದೆ ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ, ನಾವು ತನಿಖಾ ಆಯೋಗ ರಚನೆ ಮಾಡಿ ಎಲ್ಲವನ್ನೂ ತನಿಖೆ ಮಾಡಿಸಿ, ಯಾರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ ಅವೆಲ್ಲವನ್ನೂ ಬಯಲಿಗೆಳೆಯುತ್ತೇವೆ. ಇಂಥ ಕೆಟ್ಟ ರಾಜಕೀಯವನ್ನು ನಾನು ಎಂದೂ ನೋಡಿರಲಿಲ್ಲ ಎಂದರು.
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…