Featured

ಇಂಥ ಸ್ವಾರ್ಥ ಜಗದಲ್ಲಿ ನಿಸ್ವಾರ್ಥ ಸೇವೆ ಮಾಡುವ ಮಾತೃ ಹೃದಯಿ ಸಂಸ್ಥೆ ಎಂದರೆ ಅದು RSS : ಜಗ್ಗೇಶ್‌ – Vishwanews24

  • ನಾನು ಕಂಡ RSS ಜಾತಿ ಧರ್ಮ ಮೀರಿದ ಮಾತೃಹೃದಯಿ ಸಂಘಟನೆ..

  • ಇಂಥ ಸ್ವಾರ್ಥ ಜಗದಲ್ಲಿ ನಿಸ್ವಾರ್ಥ ಸೇವೆ ಮಾಡುವ ಮಾತೃಹೃದಯಿ ಸಂಸ್ಥೆ ಎಂದರೆ ಅದು  RSS ..

  • ಹೆಚ್‌ಡಿಕೆ ಹೇಳಿಕೆಗೆ ಜಗ್ಗೇಶ್‌ ತಿರುಗೇಟು

ಬೆಂಗಳೂರು: ಆರ್‌ಎಸ್‌ಎಸ್‌ ಬಗ್ಗೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ನಟ ಜಗ್ಗೇಶ್‌, “ನಾನು ಕಂಡ ಆರ್‌‍ಎಸ್‌‌ ಎಸ್ ಜಾತಿ ಧರ್ಮ ಮೀರಿದ ಮಾತೃಹೃದಯಿ ಸಂಘಟನೆ. ಜಗದಲ್ಲಿ ನಿಸ್ವಾರ್ಥಸೇವೆ ಮಾಡುವ ಮಾತೃಹೃದಯಿ ಸಂಸ್ಥೆ” ಎಂದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಆ ಸಂಸ್ಥೆಯ ಸಂಪರ್ಕ ದೊರಕಿದರೆ ಅಂಥವರು ತಮಗರಿಯದೆ ಸಾತ್ವಿಕನಾಗಿ ಸ್ವಾರ್ಥಬಿಟ್ಟು ಸಮಾಜಕ್ಕೆ ಹೆಗಲುಕೊಡುವ ಕರ್ಮಯೋಗಿ ಆಗುತ್ತಾನೆ. ದೂರನಿಂತು ಬೆಟ್ಟ ನೋಡುವರಿಗು ಆ ಬೆಟ್ಟ ಏರಿದವರಿಗು ವಿವರಣೆಗೆ ವ್ಯತಾಸವುಂಟು!ನೋಡುಗರಿಗಿಂತ ಅದರ ಸಾಂಗತ್ಯ ಇರುವವರ ಸಂಖ್ಯೆ ಹೆಚ್ಚು ಕಾರಣ ಅದರ ಮಾತೃರೂಪ ಹಾಗು ಸರ್ವಸಂಗ ಪರಿತ್ಯಾಗಿಗಳು ಕಟ್ಟಿದ ನಿಸ್ವಾರ್ಥ” ಎಂದು ತಿಳಿಸಿದ್ದಾರೆ.

“ನಾನು ಕಂಡ ಆರ್ ಎಸ್ ಎಸ್ ಜಾತಿ ಧರ್ಮ ಮೀರಿದ ಮಾತೃಹೃದಯಿ ಸಂಘಟನೆ ಕೊರೋನ ಸಂದರ್ಭವಾಗಲಿ ನೆರೆಬಂದ ಸಂದರ್ಭವಾಗಲಿ ರಾಷ್ಟ್ರಕ್ಕೆ ಸಂಕಷ್ಟ ಬಂದಾಗ ಆಗಲಿ, ವಿದ್ಯೆ ದಾನಕ್ಕಾಗಲಿ, ಅನ್ನದ ಮಾರ್ಗಕ್ಕಾಗಲಿ ಶಿಸ್ತಿನ ಸೈನ್ಯ ಇಂಥ ಸ್ವಾರ್ಥ ಜಗದಲ್ಲಿ ನಿಸ್ವಾರ್ಥಸೇವೆ ಮಾಡುವ ಮಾತೃಹೃದಯಿ ಸಂಸ್ಥೆ ಎಂದರೆ ಅದು ಒಂದೆ ಆರ್‌ಎಸ್‌‌ಎಸ್. ಯಾರಿಗೆ ಸಂಘವಿದು. ಆ ಸಂಘದಲ್ಲಿ ಅದರ ಸಿದ್ಧಾಂತ ಅಪ್ಪಿ ಜೀವಿಸುವವರು ವಿದ್ಯಾವಂತರು ರಾಷ್ಟ್ರಪ್ರೇಮಿಗಳು, ಆತ್ಮಸಾಕ್ಷಾತ್ಕಾರ ಆದ ಶ್ವೇತವರ್ಣ ಸನ್ಯಾಸಿಗಳು. ಅವರಿಗೆ ದೇಶವೆ ಮನೆ ದೇಶವಾಸಿಗಳೆ ಬಂಧುಗಳು ಅವರ ನಿಸ್ವಾರ್ಥ ಸಮಾಜಸೇವೆಯೇ ದೇವರ ಪೂಜೆ..ಆ ಸಂಘದ ಬಗ್ಗೆ ಮಾತಾಡುವ ಮುನ್ನ ಅದರ ನಿಸ್ವಾರ್ಥಗುಣ ಅರಿಯಿರಿ” ಎಂದಿದ್ದಾರೆ.

RSS ಸಂಘಟನೆ ಇಲ್ಲದೆ ಹೋಗಿದ್ದರೆ ಭಾರತ ಪಾಕಿಸ್ತಾನ ಆಗುತಿತ್ತು : ಪ್ರಭು ಚವ್ಹಾಣ್ – Vishwanews24

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago